ರಾಮ ಮಂದಿರ ಉದ್ಘಾಟನೆಗೂ ಮುನ್ನ ರಥಯಾತ್ರೆ

Social Share

ಮಂಗಳೂರು, ಸೆ.14 – ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ರಥಯಾತ್ರೆ ನಡೆಸಲು ಉಡುಪಿ ಪೇಜಾವರ ಮಠದ ಪೀಠಾಪತಿ ಹಾಗೂ ರಾಮಜನ್ಮಭೂಮಿ ಟ್ರಸ್ಟ್‍ನ ಸದಸ್ಯರಾದ ಸ್ವಾಮಿ ವಿಶ್ವಪ್ರಸನ್ನ ತೀರ್ಥರು ಮುಂದಾಗಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದರು. ಅಯೋಧ್ಯೆಯಲ್ಲಿ ಶ್ರೀ ರಾಮನ ದೇವಾಲಯಕ್ಕಾಗಿ ಆನೇಕರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಯಾತ್ರೆಯ ಸಂದರ್ಭದಲ್ಲಿ ಅವರನ್ನೂ ನೆನಪಿಸಿಕೊಳ್ಳಬೇಕು ಎಂದರು.

ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ ಮೂಲೆಗಳಿಂದ ದೇಣಿಗೆ ಹರಿದು ಬರುತ್ತಿದೆ ,ಪ್ರತಿ ವರ್ಷ ಸುಮಾರು 100 ಕೋಟಿ ರೂಪಾಯಿ ದೇಣಿಗೆ ಪಡೆದು ವ್ಯವಸ್ಥಿತವಾಗಿ ಹಣ ಬಳಕೆ ಮಾಡಲಾಗುತ್ತಿದೆ. ಯೋಜನೆ ಅಗತ್ಯ ವಸ್ತುಗಳು ದುಭಾರಿಯಾದ ಕಾರಣ 400 ಕೋಟಿ ರೂ. ವೆಚ್ಚ ಹೆಚ್ಚಿದ್ದು, ಪ್ರಸ್ತುತ ಅಂದಾಜಿನ ಪ್ರಕಾರ ನಿರ್ಮಾಣಕ್ಕೆ ಸುಮಾರು 1,300 ಕೋಟಿ ರೂ ಎಂದು ನಿಗದಿ ಮಾಡಲಾಗಿದೆ ಎಂದರು.

ರಾಮಾಯಣದಲ್ಲಿ ಹನುಮಂತನ ಪಾತ್ರ ಬಹುಮುಖ್ಯವಾಗಿದ್ದು, ಹನುಮಂತನ ನಾಡಾಗಿರುವ ಕರ್ನಾಟಕಕ್ಕೆ ರಾಮಮಂದಿರಕ್ಕೂ ವಿಶೇಷ ಸಂಬಂಧವಿದೆ ಎಂದರು. ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಪರ್ಕವನ್ನು ಅಖಂಡವಾಗಿಡಲು ರಾಜ್ಯದಿಂದ ರಾಮಮಂದಿರಕ್ಕೆ ಸ್ವರ್ಣ ಶಿಖರ(ಚಿನ್ನದ ಶಿಖರ) ನೀಡಲಾಗುವುದು ಎಂದು ಹೇಳಿದರು.

ರಾಮ ಜನ್ಮಭೂಮಿ ಟ್ರಸ್ಟ 2024 ರಲ್ಲಿ ಮಕರ ಸಂಕ್ರಾಂತಿಯಂದು ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಸ್ವಾಮಿ ಹೇಳಿದರು. ಎತ್ತರದ ವಿಗ್ರಹವನ್ನು ಸಂಪೂರ್ಣವಾಗಿ ನೋಡಲಾಗದ ಕಾರಣ ಭಕ್ತರ ಕಣ್ಣುಗಳ ಅಳತೆಗೆ ಅನುಗುಣವಾಗಿ ವಿಗ್ರಹದ ಗಾತ್ರ ಇರುತ್ತದೆ ಎಂದರು. ರಥಯಾತ್ರೆಯ ರೂಪರೇಷೆ ಸಿದ್ದಗೊಳ್ಳತ್ತಿದೆ ಭಕ್ತರು ಕೂಡ ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು

Articles You Might Like

Share This Article