Home ಇದೀಗ ಬಂದ ಸುದ್ದಿ ಎಲ್ಲಾ ಪೌರ ಕಾರ್ಮಿಕರ ಸೇವೆ ಖಾಯಂ : ಸಿಎಂ ಸಿದ್ದರಾಮಯ್ಯ

ಎಲ್ಲಾ ಪೌರ ಕಾರ್ಮಿಕರ ಸೇವೆ ಖಾಯಂ : ಸಿಎಂ ಸಿದ್ದರಾಮಯ್ಯ

0
ಎಲ್ಲಾ ಪೌರ ಕಾರ್ಮಿಕರ ಸೇವೆ ಖಾಯಂ : ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಏ.20- ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಾರ್ಟ್‌ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ.

ಇದನ್ನು ಮಾಡಿದ್ದು ನಮ ಸರ್ಕಾರವೇ, ಈಗ ಖಾಯಂ ಮಾಡುವುದೂ ಕೂಡ ನಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

ಸಾರ್ಟ್‌ ಸಿಟಿ ಯೋಜನೆಯಲ್ಲಿ 6,928 ಕೋಟಿ ರೂ. ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.