ಬೆಂಗಳೂರು,ಫೆ.18 – ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಡೆ ಹಿಡಿಯಲಾಗಿದ್ದ ಎಲ್ಲಾ ಕಾಮಗಾರಿಗಳನ್ನು ಮರು ಆರಂಭಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಈ ಸಂಬಂಧ ನಗರಾಭಿವೃದಿ ಇಲಾಖೆ ಕಾರ್ಯದರ್ಶಿ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಮಾರ್ಗ ಸೂಚಿ ಅನ್ವಯ ಅಂದಾಜು ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆಯಬೇಕು. ಸಕ್ಷಮ ಪ್ರಾಧಿಕಾರದಿಂದ ಆಡಳಿತಾತ್ಮಕ ಅನುಮೋದನೆ ಮತ್ತು ತಾಂತ್ರಿಕ ಮಂಜೂರಾತಿ ಪಡೆದು ಟೆಂಡರ ಪ್ರಕ್ರಿಯೆ ಕೈಗೊಂಡು ಅನದುಆನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.
ಎಸ್‍ಎಸ್‍ಸಿ ವಿಶೇಷ ಅನುದಾನದಡಿ 64,265,50 ಲಕ್ಷ ರೂ.ಗಳಡಿ ಕೈಗೊಳ್ಳುವ ಕಾಮಗಾರಿಗಳು ಪ್ರಾರಂಭಿಸಬೇಕಾಗಿರುವುದರಿಂದ ಮುಂದಿನ ಆದೇಶದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಈ ಹಿಂದೆ ತಿಳಿಸಲಾಗಿತ್ತು ಆರ್ಥಿಕ ಇಲಾಖೆ ಅನುಮತಿ ನೀಡಿರುವುದರಿಂದ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಅಭಿವೃದ್ದಿ ಕಾಮಗಾರಿಯನ್ನು ಮರು ಆರಂಭಿಸಬಹದಾಗಿದೆ ಎಂದು ತಿಳಿಸಿದೆ.
