Saturday, September 14, 2024
Homeರಾಜ್ಯಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..?

ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..?

ಬೆಂಗಳೂರು,ಆ.17– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಏಕೆಂದರೆ ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ರವರು ಅಂದಿನ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.ಈ ಹಿಂದೆ 2011 ರಲ್ಲಿ ನಡೆದಿದ್ದ ಘಟನೆಯನ್ನು ಅವಲೋಕಿಸುವುದಾದರೆ, ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು.

ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್‌ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011 ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.

ಇದಾದ ಮೇಲೆ ಇಕ್ಕಟ್ಟಿಗೆ ಸಿಲುಕಿದ ಬಿಎಸ್‌‍ವೈ ತಮ ಹ್ದುೆಗೆ ರಾಜೀನಾಮೆ ನೀಡಬೇಕಾಯಿತು. ಯಾಕೆಂದರೆ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದ ನಂತರ ವಕೀಲ ಸಿರಾಜಿನ್‌ ಬಾಷಾ ಯಡಿಯೂರಪ್ಪ ವಿರುದ್ಧ 5 ಖಾಸಗಿ ದೂರುಗಳನ್ನು ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಯಡಿಯೂರಪ್ಪಗೆ ಸಮನ್‌್ಸ ಜಾರಿಗೊಳಿಸಿತ್ತು.

ಕೋರ್ಟ್‌ಗೆ ಹಾಜರಾಗಿ ಬಿಎಸ್‌‍ವೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ತಿರಸ್ಕರಿಸಿದ ಲೋಕಾಯುಕ್ತ ವಿಶೇಷ ಕೋರ್ಟ್‌ ಯಡಿಯೂರಪ್ಪರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಾದ ಬಳಿಕ ಮುಂದೆ ನಡೆದ್ದೆಿಲ್ಲ ಒಂದು ಇತಿಹಾಸ. ಇದೀಗ ಮತ್ತದೇ ಇತಿಹಾಸ ಮರುಕಳಿಸುತ್ತದೆಯಾ ಎಂಬ ಪ್ರಶ್ನೆ ಮೂಡಿದೆ.

ಕಳೆದ ಜುಲೈ 26 ರಂದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸುದೀರ್ಘವಾದ ದೂರೊಂದನ್ನು ಹಿಡಿದು ರಾಜ್ಯಪಾಲರ ಬಾಗಿಲು ತಟ್ಟಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧದ ಟಿ.ಜೆ.ಅಬ್ರಹಾಂರ ದೂರನ್ನು ಮುಂದಿಟ್ಟುಕೊಂಡು ರಾಜ್ಯಪಾಲರು ಸುದೀರ್ಘ ಒಂದೂವರೆ ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದರು.

RELATED ARTICLES

Latest News