ಬೆಂಗಳೂರು, ಮೇ 15-ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅನುಮತಿ ನೀಡಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮಂಡಲದ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸದಂತೆ ಸಭಾಧ್ಯಕ್ಷರು ಶಾಸಕರಿಗೆ ಪ್ರಕಟಣೆ ಮೂಲಕ ತಿಳಿಸಿದ್ದರು.
- Advertisement -
ರಾಜ್ಯದಲ್ಲಿ ಎರಡು ಹಂತಗಳ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಸಮಿತಿಗಳ ಸಭೆಗಳನ್ನು ನಡೆಸಲು ಸಭಾಧ್ಯಕ್ಷರು ಶಾಸಕರಿಗೆ ಅನುಮತಿ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
