Tuesday, May 28, 2024
Homeರಾಜ್ಯವಿಧಾನ ಮಂಡಲ/ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ

ವಿಧಾನ ಮಂಡಲ/ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ

ಬೆಂಗಳೂರು, ಮೇ 15-ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅನುಮತಿ ನೀಡಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮಂಡಲದ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸದಂತೆ ಸಭಾಧ್ಯಕ್ಷರು ಶಾಸಕರಿಗೆ ಪ್ರಕಟಣೆ ಮೂಲಕ ತಿಳಿಸಿದ್ದರು.

ರಾಜ್ಯದಲ್ಲಿ ಎರಡು ಹಂತಗಳ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಸಮಿತಿಗಳ ಸಭೆಗಳನ್ನು ನಡೆಸಲು ಸಭಾಧ್ಯಕ್ಷರು ಶಾಸಕರಿಗೆ ಅನುಮತಿ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News