Friday, April 4, 2025
Homeರಾಜ್ಯಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ...

ಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ ಯುವಕರಿಂದ ಹಲ್ಲೆ

ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ ವ್ಯಕ್ತಿಯಾಗಿದ್ದು ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ರಾತ್ರಿ ಸನ್‍ಶೈನ್ ಬಾರ್‍ನಲ್ಲಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕನೊಬ್ಬ ಆಕ್ಷೇಪಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ.

ಕೆಲವು ನಿಮಿಷಗಳ ನಂತರ ಬಾರ್‍ನಿಂದ ಹೊರಬಂದಾಗ ಕುಮಾರ್ ರಾಠೋಡ್ ನನ್ನು ಅಡ್ಡಗಟ್ಟಿದ ಸುಮಾರು 30 ಮಂದಿ ಧಮಕಿ ಹಾಕಿದ್ದಾರೆ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ವಿಚಾರವಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುಮಾರ್ ರಾಠೋಡ್​ಗೆ ಮದ್ಯಪಾನದ ಚಟವಿದೆ. ಬಾರ್​​ನಲ್ಲಿ ಗ್ಲಾಸಿಗೆ ನೀರು ಸುರಿಯುವ ಸಂದರ್ಭ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಹನುಮ ಜಯಂತಿ ಇರುವ ಕಾರಣ ಆತ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ ಮುಸ್ಲಿಂ ಯುವಕನೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. ಕೆಲವು ನಿಮಿಷಗಳ ನಂತರ ಬಾರ್​​ನಿಂದ ಹೊರಬಂದಾಗ ಅವರ ಸಮುದಾಯದ 20ರಿಂದ 30 ಮಂದಿ ಅಲ್ಲಿಗೆ ಬಂದು ಕುಮಾರ್ ರಾಠೋಡ್ ಮೇಲೆ ಹಲ್ಲೆ ಮಾಡಿದ್ದಾರೆ. ಜತೆಗೆ ಆತನ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಂತರ ಸ್ಥಳೀಯರು ಜಗಳ ನಿಲ್ಲಿಸಿ ಕುಮಾರ್ ರಾಠೋಡ್​ನನ್ನು ಮನೆಗೆ ತಲುಪಿಸಿದರು. ಆದರೆ, ನಂತರ ಆತನಿಗೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದೂ ಸ್ಥಳೀಯರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಮತೀಯ, ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಲಾಗಿತ್ತು. ಇದೀಗ ಗಂಗಾವತಿಯ ಶ್ರೀರಾಮ ನಗರದಲ್ಲಿ ಘಟನೆ ನಡೆದಿದೆ.

RELATED ARTICLES

Latest News