ಇಂದು ಮತ್ತೆ ಏರಿಕೆ, ಬೆಂಗಳೂರಲ್ಲಿ 105 ರೂ. ದಾಟಿದ ಪೆಟ್ರೋಲ್ ಬೆಲೆ..!

Spread the love

ನವದೆಹಲಿ, ಮಾ.29- ಇಂದು ಮತ್ತೆ ಪೆಟ್ರೋಲ್ ದರ ಲೀಟರ್‍ಗೆ 80 ಪೈಸೆ ಮತ್ತು ಡೀಸೆಲ್ 70 ಪೈಸೆ ಏರಿಕೆಯಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‍ಗೆ 100 ರೂಪಾಯಿ(100.21 ರೂ) ಗಡಿ ದಾಟಿದೆ ಬೆಂಗಳೂರಿನಲ್ಲಿ 105 ರೂ ಗೆ ಏಕೆಯಾಗಿದೆ. ಒಂದು ವಾರದಲ್ಲಿ ದೇಶಾದ್ಯಂತ ತೈಲಬೆಲೆ 5ರೂ ಹೆಚ್ಚಾಗಿದೆ, ಸ್ಥಳೀಯ ತೆರಿಗೆ ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರ ಬದಲಾಗುತ್ತದೆ.

ಮಾರ್ಚ್ 22 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price) ನಿರಂತರ ಹೆಚ್ಚಳವಾಗುತ್ತಿದೆ. ಎಂಟು ದಿನಗಳಲ್ಲಿ ಇದು ಏಳನೇ ಏರಿಕೆಯಾಗಿದ್ದು, ಇದರೊಂದಿಗೆ ಇದುವರೆಗೆ ಪೆಟ್ರೋಲ್ ಬೆಲೆ ಸುಮಾರು 4.90 ರೂ. ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ತೈಲ ಬೆಲೆ ನಿರಂತರವಾಗಿ ಏರುತ್ತಿದೆ.

ತೈಲ ಬೆಲೆ ಏರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಸುತ್ತುವರಿಯಲು ನಿರಂತರವಾಗಿ ಪ್ರಯತ್ನಿಸುತ್ತಿವೆ. ಸೋಮವಾರ ರಾಜ್ಯಸಭೆಯಲ್ಲಿ, ಪೆಟ್ರೋಲ್ ಬೆಲೆ ಏರಿಕೆಯಿಂದ ಗಗನಕ್ಕೇರುತ್ತಿರುವ ಹಣದುಬ್ಬರ ವಿಷಯದ ಕುರಿತು ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದವು.

ಅಗತ್ಯವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರನ್ನು ಕಾಡಿದೆ. ತೈಲ ಬೆಲೆ ಏರಿಕೆಯಿಂದ ಸಾರಿಗೆ ಸೇರಿದಂದ ವಿವಿಧ ವಯಯಗಲ ಮೇಲೆ ಭಾರಿ ಪರಿಣಾಮ ಬೀರಿದೆ.ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ಕಿಡಿಕಾರಿದೆ ವಿವಿಧ ರಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತದೆ.