ಕಂಟ್ರೋಲ್ ಇಲ್ಲದೆ ಹೆಚ್ಚುತ್ತಲೇ ಇದೆ ಪೆಟ್ರೋಲ್-ಡೀಸೆಲ್ ಬೆಲೆ..!

ನವದೆಹಲಿ, ಅ.29- ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ನಾಗಾಲೋಟ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‍ಗೆ 35 ಪೈಸೆ ಏರಿಕೆಯಾಗಿದ್ದು, ಇದರೊಂದಿಗೆ ದಾಖಲೆ ಪ್ರಮಾಣದ ಏರಿಕೆ ಕಂಡಂತಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‍ಗೆ 112.39ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್‍ಗೆ 103.31ರೂ.ಗೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‍ಗೆ 108.64ರೂ., ಮುಂಬೈನಲ್ಲಿ 114.47ರೂ. ಏರಿಕೆಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಡೀಸೆಲ್ ಬೆಲೆ 105.49ರೂ. ಆಗಿದೆ. ದೆಹಲಿಯಲ್ಲಿ ಡೀಸೆಲ್ ಬೆಲೆ 97.37ರೂ.ಗೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್‍ಅನ್ನು 109.12ರೂ.ಗೆ ಮಾರಾಟ ಮಾಡುತ್ತಿದ್ದು, ಡೀಸೆಲ್ ಬೆಲೆ ಲೀಟರ್‍ಗೆ 100.49ರೂ. ಏರಿಕೆಯಾಗಿದೆ.

ಚೆನ್ನೈನಲ್ಲಿ ಪೆಟ್ರೋಲ್ 105.43, ಡೀಸೆಲ್ 101.59ರೂ. ದೇಶದ ಬಹುತೇಕ ನಗರಗಳಲ್ಲಿ ಈಗಾಗಲೇ ಪೆಟ್ರೋಲ್ 100ರೂ. ಗಡಿ ದಾಟಿದ್ದು, ಡೀಸೆಲ್ ಬೆಲೆಯೂ 100ರೂ. ದಾಟಿದೆ.

ಈ ವಾರದಲ್ಲಿ ಸತತ ಮೂರನೆ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ ಸೇರಿಸಿದ ನಂತರ ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ನಿಗದಿಪಡಿಸುತ್ತವೆ.