ಪಾಕ್ ಪರ ಘೋಷಣೆ ಕೂಗಿದವರನ್ನು ಸುಮ್ಮನೆ ಬಿಡಬಾರದು : ಬಿಜೆಪಿ ಶಾಸಕ

Social Share

ಮುಂಬೈ.ಸೆ.25-ಪುಣೆಯಿಂದ ಇತ್ತೀಚಿಗೆ ಪಾಕ್ ಪರ ಘೋಷಣೆಗಳನ್ನು ಕೂಗಿದವರನ್ನು ಸುಮ್ಮನೆ ಬಿಡಬಾರದು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳ ನಡೆಸಿದ ಕಾರ್ಯಾಚರಣೆ ವಿರೋದಿಸಿ ಪಿಎಫ್ಐ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವವರು ದೇಶದ್ರೋಹಿಗಳು ಅವರನ್ನು ಬಂದಿಸಿ ಅವರಿಗೆ ತಕ್ಕ ಶಿಕ್ಷೆನೀಡಬೇಕು ಎಂದರು.

ಸಂಘಟನೆಯನ್ನು ನಿಷೇದಿಸಬೇಕು ಸಮಾಜ ಘಾತುಕರನ್ನು ಸುಮ್ಮನೆ ಬಿಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ. ಮಹಾರಾಷ್ಟ್ರ ಸರ್ಕಾರ ಕೂಡ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ ಆದರೆ ನಾನಂತು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.ಪೆÇಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆದಿದೆ.

Articles You Might Like

Share This Article