ಬೆಂಗಳೂರು,ಜು.13- ಸಾರ್ವಜನಿಕ ರಸ್ತೆಯಲ್ಲಿ ಪಿಸ್ತೂಲು ಹಿಡಿದುಕೊಂಡು ಬೈಕ್‍ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಾಗಿ ಆಡುಗೋಡಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಮಾರ್ಬಲ್ ರಸ್ತೆಯಲ್ಲಿ ಕಳೆದೆರಡು ದಿನಗಳ ಹಿಂದೆ ಹಾಡುಹಗಲೇ ಬೈಕ್ ಸವಾರನೊಂದಿಗೆ ಹಿಂಬದಿ ಕುಳಿತು ಕೈಯಲ್ಲಿ ಪಿಸ್ತೂಲು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಗಮನಿಸಿ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಈ ವ್ಯಕ್ತಿ ಯಾರು? ಈತನಿಗೆ ಪಿಸ್ತೂಲು ಹೇಗೆ ಸಿಕ್ಕಿತು? ಏತಕ್ಕಾಗಿ ಪಿಸ್ತೂಲ್ ಹಿಡಿದುಕೊಂಡು ಎಲ್ಲಿಗೆ ಹೋಗುತ್ತಿದ್ದ ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಈ ಮಾರ್ಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವ್ಯಕ್ತಿಯ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ.