ಬೀದಿನಾಯಿಗಳ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Social Share

ಹೊಸದಿಲ್ಲಿ, ನ.18 – ಬೀದಿನಾಯಿಗಳನ್ನು ಸಾಕುವುದು ಎಂದರೆ ಬೀದಿಗಿಳಿದು, ಹೋರಾಟ ಮಾಡಿ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುವುದು ಎಂದರ್ಥವಲ್ಲ ಎಂದು ಸವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಮಾರು 60ಕ್ಕೂ ಹೆಚ್ಚು ಬೀದಿನಾಯಿಗಳಿಗೆ ರಕ್ಷಣೆ ನೀಡುವಂತೆ ಮಹಿಳೆಯೊಬ್ಬರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಎಂ ಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುವಾಗ ಇದೇ ವಿಷಯದ ಕುರಿತು ಮತ್ತೊಂದು ಪೀಠವು ವಿಷಯವನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿರುವುದರಿಂದ ಪ್ರಸ್ತುತ ರಿಟ್ ಅರ್ಜಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

2025ರ ಜೂನ್ ವೇಳೆಗೆ 175 ಕಿ.ಮೀ. ಮೆಟ್ರೋ ಮಾರ್ಗ ಸಿದ್ಧ

ರಾಜ್ಯದಲ್ಲಿ ಬೀದಿ ನಾಯಿಗಳನ್ನು ಸಂರಕ್ಷಿಸಲಾಗುತ್ತಿಲ್ಲ ಎಂದು ಪ್ರತಿಪಾದಿಸಿ ಮಧ್ಯಪ್ರದೇಶ ಮೂಲದ ಸಮ್ರಿನ್ ಬಾನೊ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ತಾನು ಸಾಕುವುದಾಗಿ ಹೇಳಿಕೊಂಡ 67 ಬೀದಿ ನಾಯಿಗಳಿಗೆ ರಕ್ಷಣೆ ನೀಡುವಂತೆ ಕೋರಿದರು.

ಸಿದ್ದರಾಮಯ್ಯ, ಡಿಕೆಶಿ ಚುನಾವಣೆಯಲ್ಲಿ ಸ್ಪರ್ಧಿಸೋದು ಬೇಡ : ಸಂತೋಷ ಲಾಡ್

stray, dogs, protection, Supreme Court, rejected,

Articles You Might Like

Share This Article