Monday, May 6, 2024
Homeರಾಷ್ಟ್ರೀಯಕಿಸಾನ್ ಸಮ್ಮಾನ್ ಕುರಿತು ರೈತರಗೆ ಭರ್ಜರಿ ಸುದ್ದಿ..!

ಕಿಸಾನ್ ಸಮ್ಮಾನ್ ಕುರಿತು ರೈತರಗೆ ಭರ್ಜರಿ ಸುದ್ದಿ..!

ನವದೆಹಲಿ,ಜ.12- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದ ಅನ್ನದಾತನ ಮನಗೆಲ್ಲಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿರುವ ಆರ್ಥಿಕ ನೆರವಿನ ಹಣವನ್ನು 6 ರಿಂದ 9 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ.

ಪ್ರಸ್ತುತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಅರ್ಹ ರೈತರಿಗೆ ವಾರ್ಷಿಕವಾಗಿ 3 ಕಂತುಗಳಲ್ಲಿ 6 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಬರುವ ಜೂನ್ ತಿಂಗಳಿನಿಂದ ಅನ್ವಯವಾಗುವಂತೆ 9 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ.

ಫೆಬ್ರವರಿ 1ರಂದು ಹಣಕಾಸು ಖಾತೆಯನ್ನು ಹೊಂದಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಮಂಡಿಸಲಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿರುವ ಹಣವನ್ನು ಹೆಚ್ಚಳ ಮಾಡಲು ಸಮ್ಮತಿಸಿದ್ದಾರೆಂದು ತಿಳಿದುಬಂದಿದೆ.

ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಮ್ಮತಿಸಿದ್ದು, ಇನ್ನು ಮುಂದೆ ರೈತರ ಖಾತೆಗೆ ವಾರ್ಷಿಕವಾಗಿ 9 ಸಾವಿರ ರೂ. ಪ್ರತಿ ನಾಲ್ಕು ತಿಂಗಳಿಗೆ ಒಂದರಂತೆ ಮೂರು ಕಂತುಗಳಲ್ಲಿ ಫಲಾನುಭವಿಗಳಿಗೆ ಜಮಾವಣೆಯಾಗಲಿದೆ. ಒಟ್ಟು 13 ಕೋಟಿ ರೈತ ಕುಟುಂಬಗಳು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಫಲಾನುಭವಿಗಳಾಗಲಿವೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ರೈತ ಕುಟುಂಬಗಳು ಕೆಲವೊಂದು ನೀತಿ ನಿಯಮಗಳನ್ನು ಹಾಗೂ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ.

ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್

ಇ-ಕೆವೈಸಿ ಮತ್ತು ಇತರ ಮಾನದಂಡಗಳ ನಿಯಮಗಳನ್ನು ಪೂರೈಸುವ ರೈತರಿಗೆ ಮಾತ್ರ ಯೋಜನೆಯ ಪ್ರಯೋಜನ ದೊರೆಯುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣವನ್ನು ಹೆಚ್ಚಿಸುವುದರ ಜೊತೆಗೆ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ಬೆಳೆಗಳಿಗೆ ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮೇಲೆ ಪ್ಯಾನಲ್ ಸ್ಥಾಪಿಸುವ ಬಗ್ಗೆಯೂ ಸಹ ಘೋಷಿಸಬಹುದು ಎಂದು ಹೇಳಲಾಗುತ್ತಿದೆ.

ಏನಿದು ಯೋಜನೆ ! :
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ವಲಯದ ಯೋಜನೆಯಾಗಿದ್ದು, ಕೆಲವು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟು ದೇಶಾದ್ಯಂತ ಎಲ್ಲಾ ಕೃಷಿಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಯೋಜನೆಯಡಿ ರೂ. 6000/- ಅನ್ನು ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ರೂ.2000/- ನೇರವಾಗಿ ರೈತರ ಆರ್ಧಾ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ರೈತ ಕೇಂದ್ರಿತ ಡಿಜಿಟಲ್ ಮೂಲಸೌಕರ್ಯವು ಯಾವುದೇ ಮಧ್ಯವರ್ತಿಗಳ ಒಳಗೊಳ್ಳುವಿಕೆ ಇಲ್ಲದೆ ದೇಶದಾದ್ಯಂತ ಎಲ್ಲಾ ರೈತರಿಗೆ ಯೋಜನೆಯ ಪ್ರಯೋಜನಗಳನ್ನು ತಲುಪುವಂತೆ ಮಾಡಿದೆ, ಫಲಾನುಭವಿಗಳನ್ನು ನೋಂದಾಯಿಸುವಲ್ಲಿ ಮತ್ತು ಪರಿಶೀಲಿಸುವಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುತ್ತದೆ. ಭಾರತ ಸರ್ಕಾರವು 11 ಕೋಟಿಗೂ ಹೆಚ್ಚು ರೈತರಿಗೆ 2.60 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ.

ಪಿಎಂ-ಕಿಸಾನ್ ಯೋಜನೆಯನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭಿಸಲಾಯಿತು. ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಹಣವನ್ನು ರಾಜ್ಯ ಸರ್ಕಾರಕ್ಕೆ ವರ್ಗಾಯಿಸಬೇಕೆಂದು ಆರಂಭದಲ್ಲಿ ರಾಜ್ಯವು ಬಯಸಿದಂತೆ ಪಶ್ಚಿಮ ಬಂಗಾಳ ರಾಜ್ಯವು 8 ನೇ ಕಂತು (ಏಪ್ರಿಲ-ಜುಲೈ, 2021) ರಿಂದ ಯೋಜನೆಗೆ ಸೇರ್ಪಡೆಗೊಂಡಿತು.

ಕಳೆದ ಹಣಕಾಸು ವರ್ಷದಲ್ಲಿ ಅಂದರೆ 2022-23 ರಲ್ಲಿ ಒಟ್ಟು ರೂ. 58,201.85 ಕೋಟಿಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಮೋದಿ ಸರ್ಕಾರ ಎರಡನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರತಿಷ್ಠೆಯಾಗಿ ತೆಗೆದುಕೊಂಡ ಯೋಜನೆ ಎಂದರೇ ಅದು ಪ್ರಧಾನ ಮಂತ್ರಿ ಕಿಸಾನ್ ಯೋಜನೆ. ಈ ಯೋಜನೆಯ ಅನ್ವಯ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಂದಾಯ ಮಾಡುತ್ತಿದೆ. ಇದರಿಂದ ಲಕ್ಷಾಂತರ ರೈತರು ಪ್ರಯೋಜನೆಯವನ್ನು ಪಡೆದುಕೊಂಡಿದ್ದಾರೆ.

ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ

ಇತ್ತೀಚಿನ ಮಾಹಿತಿಯ ಅನ್ವಯ ಕೇಂದ್ರ 15 ಹಂತದಲ್ಲಿ 2.81 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ರೈತರಿಗೆ ನೀಡಿದೆ. 11 ಕೋಟಿಗೂ ಅಧಿಕ ರೈತರು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯು ದೇಶಾದ್ಯಂತ ಜಮೀನು ಹೊಂದಿರುವ ರೈತ ಕುಟುಂಬಗಳಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಮತ್ತು ಮನೆಯ ಅಗತ್ಯಗಳಿಗೆ ಸಂಬಂಧಿಸಿದ ವೆಚ್ಚಗಳನ್ನು ಪೂರೈಸಲು ಕೆಲವು ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ.

ಪಿಎಂ ಕಿಸಾನ್ ಯೋಜನೆ ವಿಶ್ವದ ಅತಿ ದೊಡ್ಡ ನೇರ ಫಲಾನುಭವಿಗಳಿಗೆ ವರ್ಗಾವಣೆ (ಡಿಬಿಟಿ) ಯೋಜನೆಗಳಲ್ಲಿ ಒಂದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಸಿದಂತೆ ಯಾವುದೇ ಸಮಸ್ಯೆಗಳಿದ್ದರೆ, ರೈತರು tmmisbq&ie|gov.iq ಇಮೇಲ್ ಐಡಿಯಲ್ಲಿ ಸಂಪರ್ಕಿಸಬಹುದು. ಅಲ್ಲದೇ, ಪಿಎಂ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ – 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದಾಗಿದೆ.

RELATED ARTICLES

Latest News