ನವದೆಹಲಿ, ಫೆ.14- ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು.
2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.
2019 ರ ಫೆ.14 ರಂದು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಆತ್ಮಾಹುತಿ ಬಾಂಬರ್ ತನ್ನ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದು 40 ಜವಾನರನ್ನು ಕೊಂದನು. ಕೆಲವು ದಿನಗಳ ನಂತರ, ಭಾರತವು ಪ್ರತೀಕಾರವಾಗಿ ಪಾಕ್ ಆಕ್ರಮಿತ ಕಾಶ್ಮೀರದ ಬಾಲಾಕೋಟ್‌ನಲ್ಲಿ ವೈಮಾನಿಕ ದಾಳಿ ನಡೆಸಿ ಉಗ್ರಗಾಮಿಗಳ ಸದೆಬಡಿದಿತ್ತು.