ನವದೆಹಲಿ,ಆ.25-ಕರ್ನಾಟಕದ ತುಮಕೂರಿನ ಶಿರಾ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ತುರ್ತು ಪರಿಹಾರ ನಿಯಡಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಹಾಗೂ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia) August 25, 2022
ಇನ್ನು ಅಪಘಾತಕ್ಕೆ ತೀವ್ರ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ ಅವರು ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಯಿತು. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವುದಾಗಿ ಟ್ವಿಟರ್ನಲ್ಲಿ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಭಗವಂತನು ಸದ್ಗತಿ ನೀಡಲಿ ಎಂದು ಪ್ರಧಾನಿ ಪ್ರಾರ್ಥಿಸಿದ್ದಾರೆ.