Saturday, April 27, 2024
Homeರಾಷ್ಟ್ರೀಯಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 100 ರೂ. ಕಡಿತ

ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 100 ರೂ. ಕಡಿತ

ನವದೆಹಲಿ,ಮಾ8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತಗೊಳಿಸಿ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ.

ಇದು ದೇಶಾದ್ಯಂತ ಅನ್ವಯವಾಗಲಿದ್ದು, ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದಿದ್ದಾರೆ. ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮ ಹಾಗೂ ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿ ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕುವ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.

ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಅದರಾಚೆಗೆ, ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್‍ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಸುಮಾರು 32.5 ಕೋಟಿ ಎಲ್‍ಪಿಜಿ ಸಂಪರ್ಕಗಳಿವೆ. ಇದರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ಸುಮಾರು 10.25 ಕೋಟಿ ಸಿಲಿಂಡರ್‍ಗಳನ್ನು ವಿತರಣೆ ಮಾಡಲಾಗಿದೆ.

ಮಾರ್ಚ್ 1ರಂದು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳಲ್ಲಿ ಪರಿಷ್ಕರಣೆ ಮಾಡಿರಲಿಲ್ಲ.

RELATED ARTICLES

Latest News