Friday, December 6, 2024
Homeರಾಷ್ಟ್ರೀಯ | Nationalರಾಮ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ

ರಾಮ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ

ನವದೆಹಲಿ,ಜ.12- ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ಜನತೆಗೆ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ. ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ.

ನಾನು ಕೂಡ ಈ ಮಂಗಳಕರ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ. ಭಗವಂತ ನನಗೆ ಎಲ್ಲಾ ಭಾರತೀಯರನ್ನು ಪ್ರತಿನಿಧಿಸುವ ಅವಕಾಶವನ್ನು ನೀಡಿದ್ದಾನೆ ಎಂದು ಹೇಳಿದ್ದಾರೆ. ಇಂದಿನಿಂದ 11 ದಿನಗಳ ವಿಶೇಷ ಧಾರ್ಮಿಕ ವಿವಿಧಾನವನ್ನು ಪ್ರಾರಂಭಿಸುತ್ತಿದ್ದೇನೆ, ಸಾರ್ವಜನಿಕರಾಗಿ ನಿಮ್ಮೆಲ್ಲರ ಆಶೀರ್ವಾದ ಕೋರುತ್ತೇನೆ, ಈ ಸಮಯದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದಾದ ಪ್ರಯತ್ನ ಮಾಡಿದ್ದೇನೆ ಎಂದು ಬರೆದಿದ್ದಾರೆ.

ನಾನು ಕೂಡ ಈ ಪವಿತ್ರ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಪಾಲಿಗೆ ಅದೃಷ್ಟ. ಈಸಮಯದಲ್ಲಿ ಭಾರತದ ನಾಗರಿಕರನ್ನು ಪ್ರತಿನಿಸಲು ದೇವರು ನನ್ನನ್ನು ಸೃಷ್ಟಿಸಿದನು. ಇದನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಂಪ್ರದಾಯವನ್ನು ನಾನು ಆಚರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ಮತ್ತು ಶುಭಕರ ಸಂದರ್ಭವಾಗಿದ್ದು, ಅದಕ್ಕೆ ಸಾಕ್ಷಿಯಾಗುತ್ತಿರುವ ನಾನು ಅದೃಷ್ಟಶಾಲಿ. ನಾನು ಭಾವುಕನಾಗಿದ್ದೇನೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಇಂತಹ ಭಾವನೆಗಳನ್ನು ಅನುಭವಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..?

ವ್ರತದ ಮಹತ್ವ ಏನು:
ಹಿಂದೂ ಶಾಸ್ತ್ರಗಳ ಪ್ರಕಾರ, ದೇವರ ವಿಗ್ರಹದ ‘¾’ಪ್ರಾಣ ಪ್ರತಿಷ್ಠೆ’¿’ ಒಂದು ವಿವರವಾದ ಆಚರಣೆಯಾಗಿದೆ. ಇದಕ್ಕೂ ಮುನ್ನ ಸಾಕಷ್ಟು ನಿಯಮಗಳನ್ನು ಅನುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವು ಜವಾಬ್ದಾರಿಗಳ ನಡುವೆಯೂ ಎಲ್ಲಾ ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ. ಅದರ ಫಲವಾಗಿ 11 ದಿನಗಳ ವ್ರತಕ್ಕೆ ಇಂದು ಕೈ ಹಾಕಿದ್ದಾರೆ.

ಹಿಂದೂ ಧರ್ಮಗ್ರಂಥಗಳಲ್ಲಿ, ಉಪವಾಸಕ್ಕಾಗಿ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಅಂತೆಯೇ ತಮ್ಮ ದೈನಂದಿನ ದಿನಚರಿಯ ಭಾಗವಾಗಿ ಪ್ರಧಾನಿಯವರು ಬ್ರಹ್ಮ ಮುಹೂರ್ತ ಜಾಗರಣ, ಪ್ರಾರ್ಥನೆಗಳು ಮತ್ತು ಸರಳ ಆಹಾರದಂತಹ ಆಚರಣೆಗಳನ್ನು ಅನುಸರಿಸುತ್ತಾರೆ.

ಜ.16ರಿಂದಲೇ ಆರಂಭ: ಜನವರಿ 22 ರಂದು ಅಯೋಧ್ಯೆಯಲ್ಲಿನ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ವೈದಿಕ ವಿಧಿ-ವಿಧಾನಗಳು ಜನವರಿ 16 ರಂದು ಅಂದರೆ ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಜನವರಿ 22ರಂದು ವಾರಣಾಸಿಯ ಅರ್ಚಕರಾದ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಮುಖ್ಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲೇ ಸರಯೂ ನದಿ ದಂಡೆಯಲ್ಲಿ 1008 ಹುಂಡಿ ಮಹಾಯಜ್ಞವೂ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಾವಿರಾರು ಭಕ್ತರಿಗೆ ಅವಕಾಶ ಕಲ್ಪಿಸಲು ಅಯೋಧ್ಯೆಯಲ್ಲಿ ಹಲವಾರು ಟೆಂಟ್ ಸಿಟಿಗಳನ್ನು ಕೂಡ ನಿರ್ಮಿಸಲಾಗುತ್ತಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪ್ರಕಾರ, 10,000-15,000 ಜನರಿಗೆ ವ್ಯವಸ್ಥೆ ಮಾಡಲಾಗುವುದು. ಇನ್ನು ಕಾರ್ಯಕ್ರಮಕ್ಕೆ ಭಾರತ ಮತ್ತು ವಿದೇಶದಿಂದ ಹಲವಾರು ಗಣ್ಯರು ಆಹ್ವಾನಗಳನ್ನು ಸ್ವೀಕರಿಸಿರುವುದರಿಂದ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಕೊನೆಯ ಹಂತದಲ್ಲಿವೆ.

RELATED ARTICLES

Latest News