Sunday, September 15, 2024
Homeರಾಷ್ಟ್ರೀಯ | Nationalದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆ ಇದೆ : ಪ್ರದಾನಿ ಪ್ರತಿಪಾದನೆ

ದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆ ಇದೆ : ಪ್ರದಾನಿ ಪ್ರತಿಪಾದನೆ

ನವದೆಹಲಿ,ಆ.15- ದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆಯನ್ನು ಪ್ರಬಲವಾಗಿ ಪ್ರತಿಪಾದಿಸಿರುವ ಪ್ರದಾನಿ ನರೇಂದ್ರ ಮೋದಿ ಅವರು, ಆಗಾಗ್ಗೆ ನಡೆಯುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ.

78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಸಮಿತಿಯು ಅತ್ಯುತ್ತಮ ವರದಿಯನ್ನು ಸಲ್ಲಿಸಿದೆ. ರಾಜಕೀಯ ಪಕ್ಷಗಳು ಕನಸನ್ನು ನನಸಾಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆಗೆ ರಾಷ್ಟ್ರವು ಮುಂದೆ ಬರಬೇಕಿದೆ.ಪದೇ ಪದೇ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ. ಯಾವುದೇ ಯೋಜನೆ/ಉಪಕ್ರಮವನ್ನು ಚುನಾವಣೆಯೊಂದಿಗೆ ಜೋಡಿಸುವುದು ಸುಲಭವಾಗಿದೆ. ಪ್ರತಿ ಮೂರರಿಂದ ಆರು ತಿಂಗಳಿಗೊಮೆ ಎಲ್ಲೋ ಚುನಾವಣೆಗಳು ನಡೆಯುತ್ತವೆ.

ಪ್ರತಿಯೊಂದು ಕೆಲಸವೂ ಚುನಾವಣೆಗಳೊಂದಿಗೆ ಸಂಬಂಧ ಹೊಂದಿದೆ. ರಾಷ್ಟ್ರೀಯ ಸಂಪನೂಲಗಳು ಶ್ರೀಸಾಮಾನ್ಯರಿಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು, ಒಂದು ರಾಷ್ಟ್ರ ಒಂದೇ ಚುನಾವಣೆ ಎಂಬ ಕನಸನ್ನು ನನಸಾಗಿಸಲು ನಾವು ಮುಂದಾಗಬೇಕು ಎಂದು ಅವರು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು. ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದು ಬಿಜೆಪಿ ತನ್ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ.

RELATED ARTICLES

Latest News