ಮೊರ್ಬಿ ದುರಂತ : ಪ್ರಮುಖ ಕಾರ್ಯಕ್ರಮ ರದ್ದುಗೊಳಿಸಿದ ಪ್ರಧಾನಿ ಮೋದಿ

Social Share

ಅಹಮದಾಬಾದ್,ಅ.31- ಮೊರ್ಬಿ ದುರಂತದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಡೆಯಬೇಕಿದ್ದ ಪ್ರಮುಖ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಇಂದು ರದ್ದುಗೊಳಿಸಿದ್ದಾರೆ.

ನವೀಕರಣಗೊಂಡು ಕಳೆದ ವಾರವಷ್ಟೇ ಪುನರಾರಂಭಗೊಂಡಿದ್ದ ಸೇತುವೆ ನಿನ್ನೆ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು, ಇಲ್ಲಿಯವರೆಗೆ ಕನಿಷ್ಠ 132 ಸಾವುಗಳಾಗಿರುವ ಬಗ್ಗೆ ವರದಿಯಾಗಿವೆ.

ವಡೋದರಾದಲ್ಲಿ ಟಾಟಾ-ಏರ್‍ಬಸ್ ವಿಮಾನ ತಯಾರಿಕಾ ಘಟಕದ ಶಂಕುಸ್ಥಾಪನೆಗಾಗಿ ಪ್ರಧಾನಿ ಮೋದಿ ಹಿಂದಿನ ದಿನವೇ ತಮ್ಮ ತವರು ರಾಜ್ಯಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‍ನ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಏಕತಾ ಪ್ರತಿಮೆಗೆ ನಮನ ಸಲ್ಲಿಸಿದ್ದರು.

ಗುಜರಾತ್‍ನ ಮೊರ್ಬಿ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ರದ್ದುಗೊಳಿಸಿದ್ದಾರೆ. ಇಂದು ಪಕ್ಷದ ಕಾರ್ಯಕರ್ತರೊಂದಿಗೆ ನಡೆಯಬೇಕಿದ್ದ ಪ್ರಮುಖ ಕಾರ್ಯಕ್ರಮ ನಡೆಯಬೇಕಿತ್ತು.

Articles You Might Like

Share This Article