Sunday, April 28, 2024
Homeರಾಷ್ಟ್ರೀಯಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ

ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ

ನವದೆಹಲಿ,ಮಾ.1- ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಆಡಳಿತಾರೂಢ ಬಿಜೆಪಿ ಯಾವುದೇ ಕ್ಷಣದಲ್ಲೂ 100 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂಜಾನೆ 5 ಗಂಟೆವರೆಗೂ ಕೇಂದ್ರ ಚುನಾವಣಾ ಸಮಿತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತಿತರ ಪ್ರಮುಖರು ಭಾಗಿಯಾಗಿದ್ದರು.

ಸುದೀರ್ಘ ಆರು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿರುವ ಕೇಂದ್ರ ಚುನಾವಣಾ ಸಮಿತಿ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುವ ಮುನ್ನವೇ 300ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.ಮೊದಲ ಪಟ್ಟಿಯಲ್ಲಿ 100 ಅಭ್ಯರ್ಥಿಗಳು ಇರಲಿದ್ದು, ಪ್ರಧಾನಿ ನರೇಂದ್ರಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್ ಸೇರಿದಂತೆ ಹಾಲಿ ಕೆಲವು ಸಚಿವರು ಮತ್ತು ಹಾಲಿ ಸಂಸದರು ಪಟ್ಟಿಯಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣಾ ಕಣಕ್ಕೆ ಸೂಕ್ತವೆಂದು ಪರಿಗಣಿಸಲಾದ ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ಆಯ್ಕೆ ಮಾಡಲು ಈ ಬಾರಿ ವಿಶಿಷ್ಟ ತಂತ್ರ ರೂಪಿಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ತಾಂತ್ರಿಕ ವಿಧಾನ ಅಳವಡಿಸಿಕೊಳ್ಳಲು ಮುಂದಾಗಿದೆ.ತಳಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಲು ಪಕ್ಷವು ವಿಶಿಷ್ಟ ವಿಧಾನ ಅಳವಡಿಸಿಕೊಂಡಿದೆ. ನಮೋ ಆಪ್ ಮೂಲಕ ಪ್ರಸ್ತುತ ಸಂಸದರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರೋತ್ಸಾಹಿಸಲಾಯಿತು.

ಸಾಂಪ್ರದಾಯಿಕ ವಿಧಾನಗಳನ್ನು ಕೈಬಿಟ್ಟು ಪಕ್ಷವು ಪ್ರತಿ ಪ್ರದೇಶದಲ್ಲಿ ಮೂರು ಅತ್ಯಂತ ಜನಪ್ರಿಯ ನಾಯಕರ ಬಗ್ಗೆ ಅಭಿಪ್ರಾಯಗಳನ್ನು ಕೇಳುವ ಮೂಲಕ ಒಂದು ಹೆಜ್ಜೆ ಮುಂದೆ ಹೋಗಿದೆ. ಬಿಜೆಪಿ ತನ್ನ ಸಂಸದರ ಕಾರ್ಯಕ್ಷಮತೆಯನ್ನು ಸಕ್ರಿಯವಾಗಿ ನಿರ್ಣಯಿಸಿದೆ. ಪ್ರತಿ ಸಂಸದೀಯ ಕ್ಷೇತ್ರದ ಸಮಗ್ರ ವರದಿಗಳನ್ನು ಕಂಪೈಲ್ ಮಾಡಲು ಸಮೀಕ್ಷೆ ಏಜೆನ್ಸಿಗಳೊಂದಿಗೆ ಪಕ್ಷ ಕೆಲಸ ಮಾಡಿದೆ.

ಹೊಸ ಮುಖಗಳಿಗೆ ಅವಕಾಶ?:
ವಿವಿಧ ಹಿನ್ನೆಲೆಯ ಅಭ್ಯರ್ಥಿಗಳನ್ನು ಸೆಳೆಯುವ ಸಂಘಟಿತ ಪ್ರಯತ್ನದಲ್ಲಿ ಬಿಜೆಪಿ ತನ್ನ ವ್ಯಾಪ್ತಿಯನ್ನು ಪಕ್ಷದ ಗಡಿರೇಖೆ ಮೀರಿ ವಿಸ್ತರಿಸಿದೆ. ಕಡಿಮೆ ಕಾರ್ಯಕ್ಷಮತೆ ಹೊಂದಿರುವ ಸಂಸದರನ್ನು ಕೈಬಿಡಲು ಹಿಂಜರಿಯುವುದಿಲ್ಲ ಎಂದು ಪಕ್ಷದ ನಾಯಕತ್ವ ಸ್ಪಷ್ಟಪಡಿಸಿದೆ. ಇದು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು 60-70 ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲು ಕಾರಣವಾಗಬಹುದು. ಇತರ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಲಾಗಿದೆ. ಅನೇಕ ಒಬಿಸಿ ಸಂಸದರು ಮತ್ತೆ ಸ್ರ್ಪಧಿಸಬೇಕೆಂದು ಬಿಜೆಪಿ ನಿರೀಕ್ಷಿಸಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 85 ಒಬಿಸಿ ಸಮುದಾಯದ ಸಂಸದರು ಗೆಲುವು ದಾಖಲಿಸಿದ್ದರು.

ಇದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಬಾರಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆಯ ಹೆಜ್ಜೆಯಿಟ್ಟಿದೆ. ಚುನಾವಣೆಯ ಅಧಿಕೃತ ಘೋಷಣೆಯ ಮೊದಲು 50ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಪ್ರತಿ ಕ್ಷೇತ್ರಕ್ಕೆ ಹೆಚ್ಚು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸುವ ಗುರಿಯನ್ನು ಪಕ್ಷ ಹೊಂದಿದೆ.

RELATED ARTICLES

Latest News