ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ

Social Share

ಬೆಂಗಳೂರು,ನ.11- ಚೆನ್ನೈ-ಬೆಂಗಳೂರು- ಮೈಸೂರು ನಡುವೆ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ಕೊಟ್ಟರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆಯಲ್ಲಿದ್ದರು.

ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್‍ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ವಂದೇ ಭಾರತ್ 2.0¿ ರೈಲುಗಳು, ಕವಚ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ.

ಮಾಲ್ಡೀವ್ಸ್‌ನಲ್ಲಿ ಅಗ್ನಿ ಅನಾಹುತ, 9 ಭಾರತೀಯರ ಸಾವು

ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ, ಬೆಂಗಳೂರು ನಗರ ಜಂಕ್ಷನ್‍ನಲ್ಲಿ ಒಂದೇ ಒಂದು ನಿಲುಗಡೆ ಇರುತ್ತದೆ. ಈ ರೈಲು, ಚೆನ್ನೈ ಸೆಂಟ್ರಲ್‍ನಿಂದ ಬೆಳಿಗ್ಗೆ 5.50ಕ್ಕೆ ಹೊರಡುತ್ತದೆ. ಬೆಂಗಳೂರು ನಗರ ಜಂಕ್ಷನ್‍ಗೆ 359 ಕಿ.ಮೀ.ಗಳನ್ನು ಕ್ರಮಿಸಿ ಬೆಳಿಗ್ಗೆ 10:25ಕ್ಕೆ ಆಗಮಿಸುತ್ತದೆ. ಇಲ್ಲಿ ಐದು ನಿಮಿಷಗಳ ಕಾಲ ನಿಂತು, ಬೆಳಿಗ್ಗೆ 10.30 ಗಂಟೆಗೆ ಮೈಸೂರಿಗೆ ಹೊರಡುತ್ತದೆ. ನಂತರ ಮೈಸೂರು ಜಂಕ್ಷನ್‍ಗೆ 137.6 ಕಿ.ಮೀ.ಗಳ ದೂರ ಕ್ರಮಿಸಿ ಮಧ್ಯಾಹ್ನ 12.30ಕ್ಕೆ ತಲುಪುತ್ತದೆ.

ವಾಪಸ್ ಪ್ರಯಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮೈಸೂರು ಜಂಕ್ಷನ್‍ನಿಂದ ಮಧ್ಯಾಹ್ನ 1.05ಕ್ಕೆ ಹೊರಟು 2.55ಕ್ಕೆ ಬೆಂಗಳೂರು ತಲುಪುತ್ತದೆ. ಐದು ನಿಮಿಷಗಳ ನಂತರ, ಅಂದರೆ 3:00 ಗಂಟೆಗೆ ಹೊರಟು, ಚೆನ್ನೈ ಸೆಂಟ್ರಲ್ ನಿಲ್ದಾಣವನ್ನು ರಾತ್ರಿ 7:35ಕ್ಕೆ ತಲುಪುತ್ತದೆ.

ಸಂಚಾರದ ದಿನಗಳು
ಚೆನ್ನೈ-ಬೆಂಗಳೂರು-ಮೈಸೂರು ¾ವಂದೇ ಭಾರತ್ ಎಕ್ಸ್ ಪ್ರೆಸ್¿ ವಾರದಲ್ಲಿ ಆರು ದಿನಗಳ ಕಾಲ ಅಂದರೆ ಸೋಮವಾರ, ಮಂಗಳವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಸಂಚರಿಸುತ್ತದೆ.ಈ ವಂದೇ ಭಾರತ ರೈಲನ್ನು ಸಂಪೂರ್ಣವಾಗಿ ಭಾರತದ ಇಂಟಿಕ್ರೆಲ್ ಕೋಚ್ ಫ್ಯಾಕ್ಟರಿಯಲ್ಲಿ ನಿರ್ಮಾಣ ಮಾಡಲಾಗಿದೆ.

ಮತ್ತೊಂದು ವಿವಾದ : `ಹಿಂದೂ’ ಶಬ್ದದ ಸತ್ಯಶೋಧನೆಗೆ ಮುಂದಾದ ಸತೀಶ್

ವಂದೇ ಭಾರತ್ ರೈಲಿನಲ್ಲಿ 16 ಬೋಗಿಗಳ ಇರಲಿವೆ. ಸುಮಾರು 1200 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮಥ್ರ್ಯ ಹೊಂದಿದೆ. ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ ಅನುಭವ ಪಡೆಯಲಿರುವುದು ಇದರ ವಿಶೇಷವಾಗಿದೆ. ಚೆನ್ನೈನಲ್ಲಿ ವಂದೇ ಮಾತರಂ ರೈಲುಗಳು ಸಿದ್ಧಪಡಿಸಲಾಗುತ್ತಿದೆ, ಇದು ಸಂಪೂರ್ಣ ಸ್ವದೇಶಿ ರೈಲುಗಳಾಗಿದ್ದು, ಶೇ.80ರಷ್ಟು ಭಾರತದ ಕಚ್ಛಾ ವಸ್ತುಗಳನ್ನೇ ಬಳಸಲಾಗುತ್ತಿದೆ. ಒಂದು ರೈಲಿಗೆ 135 ದಶಲಕ್ಷ ಡಾಲರ್ ವೆಚ್ಚವಾಗಲಿದ್ದು, 2023ರ ಮಾರ್ಚ್ ವೇಳೆಗೆ 27 ರೈಲುಗಳು ಸಂಚಾರಕ್ಕೆ ಸಿದ್ಧವಾಗಲಿದೆ.

Articles You Might Like

Share This Article