ನವದೆಹಲಿ, ಫೆ.28- ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಯಾ, ಕಿರಣ್ ರಿಜಿಜು ಮತ್ತು .ಕೆ.ಸಿಂಗ್ ಅವರನ್ನು ಸಮನ್ವಯಕಾರರನ್ನಾಗಿ ನೆರೆಯ ದೇಶಗಳಿಗೆ ಕಳುಸಲು ನಿರ್ಧರಿಸಿದ್ದಾರ.
ಭಾರತದ ಶೇಷ ರಾಯಭಾರಿಗಳಾಗಿ ಈ ಸಚಿವರು ಉಕ್ರೇನ್ ನ ನೆರೆಯ ರಾಷ್ಟ್ರಗಳಿಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶಾಂಗ ಸಚಿವ ಎಸ್.ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಸಿದ್ದರು.
ಭಾರತೀಯ ದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ಥಳಾಂತರ ಸರ್ಕಾರದ ಪ್ರಮುಖ ಆದ್ಯತೆ ಎಂದು ಪ್ರಧಾನಿ ಸಭೆಯಲ್ಲಿ ಪ್ರತಿಪಾದಿಸಿದ್ದರು. ಸ್ಥಳಾಂತರವನ್ನು ತ್ವರಿತಗೊಳಿಸಲು ಉಕ್ರೇನ್ನ ನೆರೆಯ ರಾಷ್ಟ್ರಗಳೊಂದಿಗೆ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು ಸಭೆಯಲ್ಲಿ ನಿರ್ಧರಿಸಲಾುತು ಎಂದು ಮೂಲಗಳು ತಿಳಿಸಿವೆ.
