ದಾಖಲೆ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

Social Share

ನವದೆಹಲಿ,ನ.12- ಮೊದಲ ಬಾರಿಯ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಹೊಸ ದಾಖಲೆ ಸೃಷ್ಟಿ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಟ್ವಿಟ್ ಮೂಲಕ ಹೊಸ ಮತದಾರರಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಮಂತ್ರಿಗಳು ಉತ್ತೇಜಿಸಿದ್ದಾರೆ.

ದೇವಭೂಮಿಯ ಎಲ್ಲಾ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಬೇಕು ಎಂದು ನಾನು ವಿನಂತಿಸಿಕೊಳ್ಳುತ್ತೇನೆ ಎಂದು ಮೋದಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.

ನಡುರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಪೋಟ : 12 ಮಂದಿ ಸಾವು

ಇದೆ ಸಂದರ್ಭದಲ್ಲಿ ಅವರು ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಎಲ್ಲಾ ಯುವ ಜನತೆಗೆ ವಿಶೇಷ ಶುಭಾಶಯ ಕೋರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಮಾಚಲ ಪ್ರದೇಶದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಹಿಮಾಚಲ ಪ್ರದೇಶವನ್ನು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿಡುವ ಮೂಲಕ ದೇವಭೂಮಿಯ ಜನರ ಆಕಾಂಕ್ಷೆಗಳನ್ನು ಬಲಿಷ್ಠ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮಾತ್ರ ಈಡೇರಿಸಬಲ್ಲದು. ನಾನು ಹಿಮಾಚಲದ ಮತದಾರರಿಗೆ, ವಿಶೇಷವಾಗಿ ತಾಯಂದಿರು, ಸಹೋದರಿಯರು ಮತ್ತು ಯುವಜನರಿಗೆ ಬಲಶಾಲಿ ಸರ್ಕಾರವನ್ನು ಆಯ್ಕೆ ಮಾಡುವಂತೆ ಮನವಿ ಮಾಡುತ್ತೇನೆ. ರಾಜ್ಯದ ಸುವರ್ಣ ಭವಿಷ್ಯಕ್ಕಾಗಿ ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಶಾ ಕೇಳಿಕೊಂಡಿದ್ದಾರೆ.

ಸೋಮವಾರ ಕಾಂಗ್ರೆಸ್ ಕಾರ್ಯಪಡೆಯೊಂದಿಗೆ ಖರ್ಗೆ ಮೊದಲ ಸಭೆ

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರಲ್ಲಿ ಜಿಟಿಜಿಟಿ ಮಳೆ, ಶೀತಗಾಳಿ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಪುನರಾವರ್ತನೆಯತ್ತ ದೃಷ್ಟಿ ನೆಟ್ಟಿದೆ, ಅಭಿವೃದ್ಧಿಗೆ ನಿರಂತರತೆ ಪ್ರಮುಖವಾಗಿದೆ ಎಂದು ಒತ್ತಾಯಿಸುತ್ತದೆ. ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಮರಳಲು ಆಶಿಸುತ್ತಿದೆ, ನಾಲ್ಕು ದಶಕಗಳ ಹಿಂದಿನ ಸಂಪ್ರದಾಯದ ಮೇಲೆ ಅಕಾರದಲ್ಲಿರುವವರಿಗೆ ಮತ ಹಾಕುವ ಭರವಸೆ ಇದೆ.

Articles You Might Like

Share This Article