ಇಂದು ನನ್ನ ಜೀವನದ ಸಾರ್ಥಕ ದಿನ: ಬಿಎಸ್‍ವೈ

Social Share

ಶಿವಮೊಗ್ಗ,ಫೆ.27- ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನೂತನ ಏರ್‍ಫೋರ್ಟ್ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಯಡಿಯೂರಪ್ಪ ಅವರು ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು. ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾನ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು ಮೋದಿ ಹೇಳಿದ್ದರು. ಅದಕ್ಕಾಗಿ ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು.

ಬಿಎಸ್‍ವೈಗೆ ಮೋದಿ ಬಹುಪರಾಕ್

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಇವರು ಶಿವಮೊಗ್ಗ ಏರ್‍ಫೋರ್ಟ್ ಉದ್ಘಾಟಿಸಿರುವುದು ಸಂತಸ ತಂದಿದೆ. ಕೊಟ್ಟ ಮಾತಿನಂತೆ ಏರ್‍ಫೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ ಎಂದು ಹೇಳಿದರು.

ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.

ಕೊಟ್ಟ ಮಾತಿನಂತೆ ಏರ್‍ಫೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಲಾಗಿದೆ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ ಎಂದರು.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಕರ್ನಾಟಕದ ಅಭಿವೃದ್ಧಿಯಗೆ ಡಬಲ್ ಇಂಜಿನ್ ಸರ್ಕಾರ ಅನಿವಾರ್ಯ: PM ಮೋದಿ

ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಬಣ್ಣಸಿದರು.

ಇದೇ ವೇಳೆ ತಾವು ರಾಜ್ಯದಲ್ಲಿ ಬಿಜೆಪಿ ಕಟ್ಟಿದ ದಿನಗಳನ್ನು, ಬಿಜೆಪಿ ಆಡಳಿತವನ್ನು ಯಡಿಯೂರಪ್ಪ ಅವರು ಸ್ಮರಿಸಿದರು.

PM Modi, inaugurates, Shivamogga, airport, BS Yediyurappa,

Articles You Might Like

Share This Article