ನವದೆಹಲಿ,ಜು.5- ಜುಲೈ 26ರಂದು ಆರಂಭಗೊಳ್ಳಲಿರುವ ಬಹುದೊಡ್ಡ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್‌್ಸನಲ್ಲಿ ಪಾಲ್ಗೊಳ್ಳುವ ಭಾರತೀಯ ತಂಡವು ದೇಶವನ್ನು ಹೆಮೆಪಡುವಂತೆ ಮಾಡುತ್ತದೆ ಮತ್ತು 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಒಲಿಂಪಿಕ್‌್ಸಗಾಗಿ ಪ್ಯಾರಿಸ್‌ಗೆ ತೆರಳುತ್ತಿರುವ ಭಾರತೀಯ ತಂಡದೊಂದಿಗೆ ಸಂವಾದ ನಡೆಸಿ ಬಳಿಕ ಟ್ವೀಟ್ ಮಾಡಿರುವ ಅವರು, ನಮ ಅಥ್ಲೀಟ್‌ಗಳು ತಮ ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರುವ ವಿಶ್ವಾಸ ನನಗಿದೆ. ಅವರ ಜೀವನ ಪಯಣ ಮತ್ತು ಯಶಸ್ಸು 140 ಕೋಟಿ ಭಾರತೀಯರಿಗೆ ಭರವಸೆಯನ್ನು ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿ ಪ್ಯಾರಿಸ್ ಗೇಮ್ಸೌಗೆ ಭಾರತೀಯ ತಂಡವು ಸರಿಸುಮಾರು 120 ಅಥ್ಲೀಟ್‌ಗಳನ್ನು ಕಳುಹಿಸಿದ್ದು, ಕಳೆದ ಟೋಕಿಯೊ ಗೇಮ್ಸೌಗಿಂತ ಉತ್ತಮ ಮಟ್ಟದ ನಿರ್ವಹಣೆಯನ್ನು ನೀಡುವ ಭರವಸೆ ಇಡಲಾಗಿದೆ.ಅಥ್ಲೀಟಿಕ್ ತಂಡಕ್ಕೆ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ನಾಯಕ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಅಥ್ಲೀಟಿಕ್ ತಂಡಕ್ಕೆ ನಾಯಕನಾಗಿದ್ದಾರೆ.
28 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡದ ಕಿರುಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಟ್ರ್ಯಾಕ್ ಆ್ಯಂಡ್ ಫೀಲ್ಡ್ ಸ್ಪರ್ಧಾವಳಿಯು ಆಗಸ್ಟ್ 1ರಿಂದ 11ರ ತನಕ ಪ್ಯಾರಿಸ್‌ನಲ್ಲಿ ನಡೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು.
ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್‌್ಸ ಸಂಸ್ಥೆ ಇಂಡಿಯಾ ಹೌಸ್ ಎಂಬ ವಿಶೇಷ ವ್ಯವಸ್ಥೆ ಮಾಡಿದೆ.
ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ. ಇಂಡಿಯಾ ಹೌಸ್‌ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ.ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್‌ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರ ಪ್ರಮುಖವಾಗಿದೆ. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.