ಬೆಂಗಳೂರು,ಫೆ.6- ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಪತ್ರ ಬರೆದಿರುವ ಸಿದ್ದರಾಮಯ್ಯ, ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ಒಂದಿಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಈ ಪ್ರಶ್ನೆಗಳಿಗೆ ತಮ್ಮ ಭಾಷಣದಲ್ಲಿ ಉತ್ತರ ನೀಡುತ್ತಾರೆ ಎಂದು ನಂಬಿದ್ದೇನೆ ಎಂದಿದ್ದಾರೆ.
ಗ್ರೀನ್ ಹೈಡ್ರೋಜನ್ ಪ್ರಾಜೆಕ್ಟ್ ಗೆ 3 ಲಕ್ಷ ಕೋಟಿ : ಸಿಎಂ ಬೊಮ್ಮಾಯಿ
ಬಡಜನರ ಹಸಿದ ಹೊಟ್ಟೆಯನ್ನು ತಣಿಸಲು ಯುಪಿಎ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿಗೆ ತಂದು 80 ಕೋಟಿ ಜನರಿಗೆ ಆಹಾರಧಾನ್ಯ ವಿತರಿಸಿತ್ತು. ಆದರೆ ನಿಮ್ಮ ಸರ್ಕಾರ ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್ ನಲ್ಲಿ ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿತಗೊಳಿಸಿ ಬಡವರ ಹೊಟ್ಟೆಗೆ ಕಲ್ಲು ಹಾಕಿದೆ, ಯಾಕೆ? ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇನೆ ಎಂದು ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದು, ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ರೂ.50,121 ಕೋಟಿಯಷ್ಟು ಕಡಿಮೆ ಮಾಡಿರುವುದೇಕೆ ?
ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆ ನೀಡುವ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಿಸಲು ನೀಡಲಾಗುತ್ತಿದ್ದ ಅನುದಾನವನ್ನು ಇಳಿಸಿದ್ದೇಕೆ ? ಬೆಲೆ ಕುಸಿತ ಮತ್ತು ಬೀಜ, ಗೊಬ್ಬರದ ಬೆಲೆ ಏರಿಕೆಯಿಂದಾಗಿ ಹತ್ತಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.
ಹೀಗಿದ್ದರೂ ಹತ್ತಿ ನಿಗಮದ ಬೆಂಬಲ ಬೆಲೆ ಅನುದಾನವನ್ನು ರೂ.782 ಕೋಟಿಯಿಂದ ರೂ. 1 ಲಕ್ಷಕ್ಕೆ ಇಳಿಸಲಾಗಿದೆ. ರೈತರಿಗೆ ನೆರವಾಗುವ ಯೋಜನೆಗಳನ್ನೇ ಸ್ಥಗಿತಗೊಳಿಸಿ ರೈತರ ವಿರುದ್ದ ಸೇಡು ತೀರಿಸಿಕೊಳ್ಳುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳ ಪಾಲಿನ ಸಂಜೀವಿನಿ ನರೇಗಾ ಯೋಜನೆಯನ್ನು ಜಾರಿಗೆ ತಂದಿರುವುದು ಯುಪಿಎ ಸರ್ಕಾರ. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನರೇಗಾಕ್ಕೆ ನೀಡಲಾಗುವ ಸಹಾಯಧನವನ್ನು ಶೇಕಡಾ 21.66ರಷ್ಟು ಕಡಿಮೆ ಮಾಡಲಾಗಿದೆ.
ಕಲ್ಪತರು ನಾಡನ್ನು ವಿಶ್ವ ಮಟ್ಟಕ್ಕೆ ಕೊಂಡೋಯ್ದ ಹೆಲಿಕಾಪ್ಟರ್ ತಯಾರಿಕಾ ಘಟಕ
ನಿಮ್ಮ ಆಡಳಿತಾವಧಿಯಲ್ಲಿ ನಿರುದ್ಯೋಗದ ಪ್ರಮಾಣದ ಹೆಚ್ಚಳ ಹೊಸ ದಾಖಲೆ ನಿರ್ಮಿಸಿದೆ. ಈಗ ಗ್ರಾಮೀಣ ಜನತೆಯಿಂದಲೂ ಉದ್ಯೋಗವನ್ನು ಕಸಿದುಕೊಂಡು ಏನನ್ನು ಸಾಸಲು ಹೊರಟಿದ್ದೀರಿ? ಉಚಿತ ಎಲ್ ಪಿಜಿ ಸಿಲಿಂಡರ್ ಎಂಬ ಪೊಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದು, ಕಳೆದ ಎಂಟು ವರ್ಷಗಳಿಂದ ಎಲ್ ಪಿ ಜಿ ಸಿಲಿಂಡರ್ ಬೆಲೆಯನ್ನು ದುಪ್ಪಟ್ಟು ಮಾಡಿರುವುದೇಕೆ ?
ಹಳ್ಳಿಯಬಡವರು ಮತ್ತೆ ಉರುವರಲು ಹಾಕಿ ಒಲೆ ಉರಿಸಿ ಆರೋಗ್ಯ ಕೆಡಿಸಿಕೊಳ್ಳುತ್ತಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ ? ಇದರ ಹೊರತಾಗಿಯೂ ಎಲ್ ಪಿಜಿ ಮೇಲಿನ ಸಬ್ಸಿಡಿಯನ್ನು ಶೇಕಡಾ 75ರಷ್ಟು ಕಡಿಮೆ ಮಾಡಲಾಗಿದೆ. ಅಸಹಾಯಕ ಬಡವರ ಮೆಲೆ ಯಾಕೆ ನಿಮಗೆ ಯಾಕಿಷ್ಟು ದ್ವೇಷ ಎಂದು ಕಿಡಿಕಾರಿದ್ದಾರೆ.
ಮೋದಿ ಅವರ ಖಾಸಾ ಸ್ನೇಹಿತರಾದ ಗೌತಮ್ ಅದಾನಿ ಉದ್ಯಮ ಸಾಮ್ರಾಜ್ಯದ ಕಳ್ಳಾಟಗಳನ್ನು ಹಿಂಡನ್ ಬರ್ಗ್ ವರದಿ ಬತ್ತಲೆ ಮಾಡಿದೆ. ಈ ಕಳ್ಳಾಟದಿಂದ ಭಾರತದ ಆರ್ಥಿಕತೆ ಕುಸಿದುಹೋಗುವ ಅಪಾಯ ಎದುರಿಸುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಇದು ಸುದ್ದಿಯಾಗಿ ಭಾರತದ ಮಾನ ಹರಜಾಗುತ್ತಿದೆ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟವರು, ಎಲ್‍ಐಸಿಯಲ್ಲಿ ಪಾಲಿಸಿ ಖರೀದಿಸಿದವರು ಆತಂಕದಲ್ಲಿದ್ದಾರೆ. ವಿರೋಧ ಪಕ್ಷಗಳ ನಾಯಕರು ಕೂತರೂ ನಿಂತರೂ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಗಟ್ಟುತ್ತಿರುವ ಕೇಂದ್ರ ಸರ್ಕಾರ ಉದ್ಯಮಿ ಅದಾನಿ ಬಾನಗಡಿ ಬಗ್ಗೆ ತನಿಖೆ ಮಾಡಲು ಹಿಂಜರಿಯುತ್ತಿರುವುದೇಕೆ ಎಂದು ಖಾರವಾಗಿ ಪ್ರಶ್ನೆ ಎಸೆದಿದ್ದಾರೆ.
ಭಾರತದಲ್ಲಿ ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಿ : ಮೋದಿ ಕರೆ
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ವೆಚ್ಚದ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರವೇ ನೀಡಬೇಕಿತ್ತು. ಈ ಬಜೆಟ್ ನಲ್ಲಿ ಕೊಟ್ಟಿರುವುದು ಕೇವಲ ರೂ.2300 ಕೋಟಿ. ಯೋಜನೆ ಮುಗಿಯುವುದು 2050ಕ್ಕೋ? ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ಬೆಂಗಳೂರು ಮೆಟ್ರೋ ಯೋಜನೆಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ನರೇಂದ್ರಮೋದಿಯವರಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದಿದ್ದಾರೆ.
PM Modi, Karnataka, vist, Siddaramaiah, questions,