Friday, May 3, 2024
Homeರಾಷ್ಟ್ರೀಯಮನಮೋಹನ್ ಸಿನ್ ಸೇವೆಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಮನಮೋಹನ್ ಸಿನ್ ಸೇವೆಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ನವದೆಹಲಿ,ಫೆ.8-ಮನಮೋಹನ್ ಸಿಂಗ್ ಅವರು ವ್ಹೀಲ್‍ಚೇರ್‍ನಲ್ಲಿ ಬಂದು ಮತ ಹಾಕಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿಯನ್ನು ಹೊಗಳಿದ್ದಾರೆ. ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ನಾನು ಡಾ. ಮನಮೋಹನ್ ಸಿಂಗ್ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ, ಅವರ ಕೊಡುಗೆ ದೊಡ್ಡದಾಗಿದೆ. ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ.

ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಜನತಾದರ್ಶನದ ಅರ್ಜಿಗಳನ್ನು 3 ತಿಂಗಳೊಳಗೆ ಇತ್ಯರ್ಥ : ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರೊಂದಿಗೆ ನನಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಅವರು ಯಾವಾಗಲೂ ದೇಶಕ್ಕೆ ಮಾರ್ಗದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ತಮ್ಮ ಅಮೂಲ್ಯ ಚಿಂತನೆಗಳಿಂದ ಆರು ಬಾರಿ ಈ ಸದನಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೊಗಳಿದ್ದಾರೆ.

ಸದಸ್ಯರು ತಮ್ಮ ಕರ್ತವ್ಯಗಳ ಬಗ್ಗೆ ಎಚ್ಚರವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಲ್ಲದೇ ಮನಮೋಹನ್ ಸಿಂಗ್ ಎಲ್ಲ ಸಂಸದರಿಗೆ ಸೂರ್ತಿ ಎಂದು ಬಣ್ಣಿಸಿದ್ದಾರೆ.

RELATED ARTICLES

Latest News