ನವದೆಹಲಿ,ಜ.9- ಕೊರನಾ ಹಾಗೂ ಓಮಿಕ್ರಾನ್ ರೂಪಾಂತರಿಯು ದೇಶದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಲಿದೆ. ನೀತಿ ಆಯೋಗ, ಆರೋಗ್ಯ ಅಧಿಕಾರಿಗಳು ಸೇರಿದಂತೆ ಹಲವರು ಇದರಲ್ಲಿ ಪಾಲ್ಗೊಳ್ಳುತ್ತಿದ್ದು ಭಾರೀ ಕುತೂಹಲ ಕೆರಳಿಸಿದೆ.