ಡೆಹ್ರಾಡೂನ್,ಅ.12- ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಲು ಉತ್ತರಾಖಂಡ್‍ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆಯೇ ಇಲ್ಲಿನ ಪೀಥೋರ್‍ಘಡದಲ್ಲಿರುವ ಇತಿಹಾಸ ಪ್ರಸಿದ್ದ ಪಾರ್ವತಿಕುಂಡದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಉತ್ತರಾಖಂಡ್‍ನ ಕುಮುನ್ ಪ್ರದೇಶದಲ್ಲಿ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಸಾವಿರಾರು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಕೊಟ್ಟರು. ಇದಕ್ಕೂ ಮುನ್ನ ಬೆಳಗ್ಗೆ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‍ಗೆ ಆಗಮಿಸಿದ ಮೋದಿ ಅವರನ್ನು ಮೋದಿ ಅವರು ಪುಷ್ಕರ್‍ಸಿಂಗ್ ಧಮಿ ಆತ್ಮೀಯವಾಗಿ ಬರಮಾಡಿಕೊಂಡರು.
ಅಲ್ಲಿಂದ ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್ ಮೂಲಕ ಜೋಲಿಂಗ್‍ಕಾನ್‍ನಲ್ಲಿರುವ ಶಿವನ ನಿವಾಸ ಮತ್ತು ಕೈಲಾಸ ಶಿಖರಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆಪುನಸ್ಕಾರ ನೆರವೇರಿಸಿದರು. ಅಲ್ಲಿಂದ ಮೋದಿ ಕುಂಜಿ ಗ್ರಾಮಕ್ಕೆ ತೆರಳಿ ಸ್ಥಳೀಯರು ಹಾಗೂ ಭದ್ರತಾ ಪಡೆಗಳನ್ನು ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು.
ಮೊಬೈಲ್‌ನಲ್ಲಿ ಸೈರನ್ ಶಬ್ದ ಕೇಳಿ ಜನ ಶಾಕ್, ಕೇಂದ್ರ ಸರ್ಕಾರದಿಂದ ‘Emergency Alert’ ಪರೀಕ್ಷೆ
ಐಟಿಬಿಪಿ ಮಹಿಳಾ ಸೈನಿಕರನ್ನೂ ಪ್ರಧಾನಿ ಭೇಟಿ ಮಾಡಲಿದ್ದಾರೆ. ಸಾಂಪ್ರದಾಯಿಕ ವೇಷಭೂಷಣಗಳಲ್ಲಿ ಸ್ಥಳೀಯ ಕಲಾವಿದರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಉತ್ತರಾಖಂಡಕ್ಕೆ ತೆರಳುವ ಮುನ್ನ ಪ್ರಧಾನಮಂತ್ರಿಯವರು ಕುಂಜಿ ಗ್ರಾಮದ ಜನರೊಂದಿಗೆ ಸಂವಹನ ನಡೆಸಿ, ಪಾರ್ವತಿ ಕುಂಡಕ್ಕೆ ಭೇಟಿ ನೀಡುತ್ತೇನೆ. ಜಾಗೇಶ್ವರ ಧಾಮದಲ್ಲಿ ಪೂಜೆ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.