Thursday, February 29, 2024
Homeರಾಷ್ಟ್ರೀಯನೇತಾಜಿ ಜನ್ಮದಿನ : ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನೇತಾಜಿ ಜನ್ಮದಿನ : ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ, ಜ. 23 (ಪಿಟಿಐ) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವರ ಅಚಲವಾದ ಸಮರ್ಪಣೆಯು ಸೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ಆಜಾದ್ ಹಿಂದ್ ಫೌಜ್ ಸಂಸ್ಥಾಪಕರ ಜನ್ಮ ವಾರ್ಷಿಕೋತ್ಸವವನ್ನು ಗುರುತಿಸುವ ಪರಾಕ್ರಮ್ ದಿವಸ್ ದಿನದಂದು ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಭಾರತದ ಜನತೆಗೆ ಪರಾಕ್ರಮ್ ದಿವಸ್‍ನ ಶುಭಾಶಯಗಳು. ಇಂದು ಬೋಸ್ ಜಯಂತಿಯಂದು ನಾವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಧೈರ್ಯವನ್ನು ಗೌರವಿಸುತ್ತೇವೆ ಎಂದು ಮೋದಿ ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಯ್ನಾಡಿಗೆ ಹಿಂತಿರುಗಿದ ಮ್ಯಾನ್ಮಾರ್ ಸೈನಿಕರು

ನಮ್ಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವರ ಅಚಲವಾದ ಸಮರ್ಪಣೆಯು ಸೂರ್ತಿ ನೀಡುತ್ತಿದೆ ಎಂದು ಪ್ರಧಾನಿ ಹೇಳಿದರು.

RELATED ARTICLES

Latest News