ನವದೆಹಲಿ,ಜ.26– ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸಾರಕಕ್ಕೆ ತೆರಳಿ ಹುತಾತ ವೀರ ಯೋಧರಿಗೆ ನಮನ ಸಲ್ಲಿಸಿದರು.
ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
ಇಂದು ಬೆಳಗ್ಗೆ 10.30ಕ್ಕೆ ಸಮಾರಂಭದ ಮುಖ್ಯ ಮೆರವಣಿಗೆ ವಿಜಯ್ ಚೌಕ್ ನಲ್ಲಿ ಪ್ರಾರಂಭವಾಗಿ, ಕರ್ತವ್ಯ ಪಥದಲ್ಲಿ ಮುಂದುವರೆದು ಇಂಡಿಯಾ ಗೇಟ್ ಮೂಲಕ ಹಾದುಹಾಗಿ, ಕೆಂಪುಕೋಟೆಯಲ್ಲಿ ಮುಕ್ತಾಯಗೊಂಡಿತು.