Saturday, December 28, 2024
Homeರಾಷ್ಟ್ರೀಯ | Nationalಮನಮೋಹನ್ ಸಿಂಗ್ ಅವರ ಗುಣಗಾನ ಮಾಡಿದ ಪ್ರಧಾನಿ ಮೋದಿ

ಮನಮೋಹನ್ ಸಿಂಗ್ ಅವರ ಗುಣಗಾನ ಮಾಡಿದ ಪ್ರಧಾನಿ ಮೋದಿ

PM Modi praises Manmohan Singh

ನವದೆಹಲಿ,ಡಿ.27- ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಗೌರವಪೂರ್ಣ ವಿದಾಯ ಹೇಳಿದ ಪ್ರಧಾನಿ ನರೇಂದ್ರಮೋದಿ ಅವರು ಸರಣಿ ಟ್ವೀಟ್ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರ ನಷ್ಟಕ್ಕೆ ಶೋಕ ವ್ಯಕ್ತಪಡಿಸುತ್ತದೆ.

ವಿನಮ್ರ ವ್ಯಕ್ತಿತ್ವದಿಂದಲೇ ರಾಜಕಾರಣದಲ್ಲಿ ಅತ್ಯುನ್ನತ ಮಟ್ಟಕ್ಕೆ ಏರಿದವರು ಎಂದು ಗುಣಗಾನ ಮಾಡಿದ್ದಾರೆ. ಗೌರವಾನ್ವಿತ ಅರ್ಥಶಾಸ್ತ್ರಜ್ಞ ಎಂದು ಜಗತ್ತಿನಾದ್ಯಂತ ಹೆಸರು ಮಾಡಿದ್ದರು. ಹಣಕಾಸು ಸಚಿವ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಡಾ. ಸಿಂಗ್, ನಮ ಆರ್ಥಿಕ ನೀತಿಯ ಮೇಲೆ ಬಲವಾದ ಮುದ್ರೆ ಹಾಕಿದರು. ಪ್ರಧಾನಿಯಾಗಿ ಅವರು ಜನರ ಜೀವನವನ್ನು ಸುಧಾರಿಸಲು ವ್ಯಾಪಕ ಪ್ರಯತ್ನಗಳನ್ನು ಮಾಡಿದ್ದರು ಎಂದು ಕಂಬನಿ ಮಿಡಿದಿದ್ದಾರೆ.

ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಡಾ. ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾಗಿದ್ದರು. ಆ ಸಮಯದಲ್ಲಿ ನಾವಿಬ್ಬರೂ ನಿರಂತರ ಸಂವಹನ ನಡೆಸುತ್ತಿದ್ದೆವು. ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಾವು ವ್ಯಾಪಕವಾದ ಚರ್ಚೆ ಮಾಡಿದ್ದೇವೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ನೆನಪಿನಲ್ಲಿರುತ್ತದೆ. ಎಂದು ಮತ್ತೊಂದು ಟ್ವೀಟ್ನಲ್ಲಿ ಮೋದಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರುಕೂಡ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾನು ಓರ್ವ ಗುರು ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ.

RELATED ARTICLES

Latest News