ನವದೆಹಲಿ,ಜು.30- ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ರಾಜ್ಯಕ್ಕೆ ಎಲ್ಲ ನೆರವು ನೀಡುವಂತೆ ರಾಹುಲ್‌ಗಾಂಧಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ. ತಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹತ್ಪೂರ್ವಕ ಸಂತಾಪಗಳು. ಇನ್ನೂ ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದು ರಾಹುಲ್ ಗಾಂಧಿ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಯಾವುದೇ ನೆರವು ನೀಡುವುದಾಗಿ ಭರವಸೆ ನೀಡಿದರು. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ, ಅವರು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ನನಗೆ ಭರವಸೆ ನೀಡಿದರು.
ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಮಗೆ ತಿಳಿಸಲು ನಾನು ಅವರಿಗೆ ವಿನಂತಿಸಿದ್ದೇನೆ … ನಾನು ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ವಯನಾಡಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡಲು ಎಲ್ಲಾ ಯುಡಿಎಫ್ ಕಾರ್ಯಕರ್ತರಿಗೂ ಗಾಂಧಿ ಅವರು ಮನವಿ ಮಾಡಿಕೊಂಡಿದ್ದಾರೆ.