ನವದೆಹಲಿ, ಸೆ.26 -ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 90ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.ಹೆಸರಾಂತ ಅರ್ಥ ಶಾಸ್ತ್ರಜ್ಞರಾಗಿರುವ ಸಿಂಗ್, ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ ಅವಯಲ್ಲಿ 2004-14ರ ನಡುವೆ ಭಾರತದ ಪ್ರಧಾನಿಯಾಗಿದ್ದರು.
ಅವರು 1991-96ರ ಅವಯಲ್ಲಿ ಪಿ.ವಿ . ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಭಾರತದ ಹಣಕಾಸು ಸಚಿವರಾಗಿದ್ದರು. ಇದು ದೇಶದ ಆರ್ಥಿಕತೆಯ ಯುಗ. ಈ ಯುಗ ವ್ಯಾಪಕವಾದ ಸುಧಾರಣೆಗಳಿಂದ ಗುರುತಿಸಲ್ಪಟ್ಟಿದೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
Birthday greetings to former PM Dr. Manmohan Singh Ji. Praying for his long and healthy life.
— Narendra Modi (@narendramodi) September 26, 2022
ಇದೇ ವೇಳೆ ನವರಾತ್ರಿಯ ಆರಂಭದ ದಿನವಾದ ಇಂದು ದೇಶದ ಜನತೆಗೆ ಶುಭ ಕೋರಿ ಎಲ್ಲರಿಗೂ ಸಂತೋಷ, ಅದೃಷ್ಟ ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸಿದ್ದಾರೆ.
ಈ ಶುಭ ಸಂದರ್ಭ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ಜೈ ಮಾತಾ ದಿ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.