ನೆಹರೂ ಹಾರಿಸಿದ ತ್ರಿವರ್ಣ ಧ್ವಜದ ಚಿತ್ರ ಟ್ವೀಟ್ ಮಾಡಿದ ಮೋದಿ

Social Share

ನವದೆಹಲಿ, ಜು 22- ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಹರ್ ಘರ್ ತಿರಂಗ ಆಂದೋಲನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮನವಿ ಮಾಡಿದ್ದಾರೆ.

ಈ ಆಂದೋಲನ ತ್ರಿವರ್ಣ ಧ್ವಜದೊಂದಿಗಿನ ನಮ್ಮ ಸಂಪರ್ಕವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ನಾವು ಬ್ರಿಟೀಷರ ಕ್ರೂರ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಧೈರ್ಯ-ಸಾಹಸ ಮತ್ತು ಪ್ರಯತ್ನಗಳನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು ತೊರೊಣ ಎಂದು ಅವರು ತಿಳಿಸಿದ್ದಾರೆ.

ಈ ವರ್ಷ, ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುವಾಗ, ನಾವು ಹರ್ ಘರ್ ತಿರಂಗಾ ಆಂದೋಲನವನ್ನು ಬಲಪಡಿಸೋಣ. ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ಆಗಸ್ಟ್ 13 ಮತ್ತು 15 ರ ನಡುವೆ ಅದನ್ನು ನಿಮ್ಮ ಮನೆಗಳಲ್ಲಿ ಪ್ರದರ್ಶಿಸಿ.

ಈ ಆಂದೋಲನವು ರಾಷ್ಟ್ರಧ್ವಜದೊಂದಿಗೆ ನಮ್ಮ ಸಂಪರ್ಕವನ್ನು ಗಾಢಗೊಳಿಸೋಣ ಎಂದಿದ್ದಾರೆ. ಇದೇ ವೇಳೆ ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಳವಡಿಸಿಕೊಳ್ಳಲು ಕಾರಣವಾದ ಅಧಿಕೃತ ಸಂವಹನಗಳ ವಿವರಗಳನ್ನೂ ಮೋದಿ ಟ್ವಟರ್‍ನಲ್ಲಿ ಫೋಸ್ಟï ಮಾಡಿದ್ದಾರೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ಚಿತ್ರವನ್ನು ಸಹ ಅವರು ಪೊಸ್ಟï ಮಾಡಿದ್ದಾರೆ.

Articles You Might Like

Share This Article