Friday, September 20, 2024
Homeರಾಷ್ಟ್ರೀಯ | Nationalವಯನಾಡ್ ಭೂಕುಸಿತ ದುರಂತ : ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಮೃತರ ಸಂಖ್ಯೆ, ಈವರೆಗೆ 80ಕ್ಕೂ ಹೆಚ್ಚ್ಚುಮಂದಿ ಸಾವು

ವಯನಾಡ್ ಭೂಕುಸಿತ ದುರಂತ : ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಮೃತರ ಸಂಖ್ಯೆ, ಈವರೆಗೆ 80ಕ್ಕೂ ಹೆಚ್ಚ್ಚುಮಂದಿ ಸಾವು

ವಯನಾಡ್ (ಕೇರಳ),ಜು.30– ದೇವರನಾಡು ಕೇರಳದ ಗುಡ್ಡಗಾಡು ಪ್ರದೇಶ ವಯನಾಡು ಜಿಲ್ಲೆಯಲ್ಲಿ ಸತತ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಮೃತರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಈ ದುರಂತದಲ್ಲಿ 400ಕ್ಕೂ ಹೆಚ್ಚು ಕುಟುಂಬಗಳು ಅಪಾಯಕ್ಕೆ ಸಿಲುಕಿವೆ. ವಯನಾಡು ಜಿಲ್ಲೆಯ ಮುಂಡಕ್ಞೈ, ಚೊರಲಾಲ, ಅಟ್ಟಮಾಲ ಮತ್ತು ನುಲ್ಬಾಳು ಗ್ರಾಮಗಳು ಭೂ ಕುಸಿತದಿಂದ ಬಹುತೇಕ ಭೂಪಟದಿಂದಲೇ ಕಣರೆಯಾಗಿವೆ.

ಮುಂಕ್ಕೈ ಪ್ರದೇಶದಲ್ಲಿ ಅನೇಕ ಜನರನ್ನು ಏರ್ಲಿಫ್‌್ಟ ಮಾಡುವ ಮೂಲಕ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ. ರಕ್ಷಣೆಗೆ ಧಾವಿಸಿರುವ ಎನ್ಡಿಆರ್ಎಫ್ ಮತ್ತು ಸ್ಥಳೀಯ ಪೊಲೀಸರು ಈವರೆಗೂ 50ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಭೂಕುಸಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸರು, ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ವಯನಾಡು ಜಿಲ್ಲಾಧಿಕಾರಿ ಮೇಘಶ್ರೀ.ಡಿ.ಆರ್ ತಿಳಿಸಿದ್ದಾರೆ. ಸರ್ಕಾರಿ ಸೇವಾ ಸಂಸ್ಥೆಗಳ ಜೊತೆ ಸ್ವಯಂ ಸೇವಕರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿ ಮಾನವೀಯತೆ ಮೆರೆದಿದ್ದಾರೆ.

ಕರಮಂತೋಡು ನದಿಯ ಬಾಣಸುರ ಸಾಗರ ಅಣೆಕಟ್ಟಿನ ಶೆಟರ್ನ್ನು ತೆರೆಯಲಾಗಿದ್ದು, ತಗ್ಗುಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಲಾಗಿದೆ. ನಸುಕಿನ ಜಾವ 2 ಗಂಟೆಯಲ್ಲಿ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಭೂ ಕುಸಿತ ಉಂಟಾಗಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು-ನೋವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ.

ಚೂರಲಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತಪಟ್ಟಿದೆ. ಗಾಯಗೊಂಡ 16 ಜನರನ್ನು ವಯನಾಡಿನ ಮೆಪ್ಪಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಕಾರ್ಯಾಚರಣೆಗಿಳಿದ ರಕ್ಷಣಾ ಪಡೆ:
ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ತಿಳಿಸಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ದ ಸೂಚನೆ ಮೇರೆಗೆ ಹೆಚ್ಚುವರಿಯಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ನೆರೆ ಪ್ರದೇಶಕ್ಕೆ ಆಗಮಿಸಿ ಕಾರ್ಯಚರಣೆಗಿಳಿದಿವೆ. ಸೂಲೂರಿನಿಂದ ಎರಡು ವಾಯುಪಡೆಯ ಹೆಲಿಕಾಪ್ಟರ್ಗಳು, ಎಂಐ-17 ಮತ್ತು ಎಎಲ್ಹೆಚ್ ರಕ್ಷಣಾ ಕಾರ್ಯಾಚರಣೆ ತೊಡಗಿವೆ.

ಕೆಎಸ್ಡಿಎಂಎ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್ಗೆ ತೆರಳಲು ಸೂಚನೆ ನೀಡಲಾಗಿದೆ. ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.ಭೂಕುಸಿತದ ಹಿನ್ನೆಲೆಯಲ್ಲಿ ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಅಥವಾ ಅವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ತೊಡಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕಾಸರಗೋಡು, ಕಣ್ಣೂರು, ವಯನಾಡು, ಕೋಯಿಕ್ಕೋಡ್ ಮತ್ತು ಮಲ್ಲಪುರಂ ಸೇರಿದಂತೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

ವಯನಾಡ್ ಕಲೆಕ್ಟರ್ ಸರ್ಕಾರಿ ಅಧಿಕಾರಿಗಳು ತಮ ಕಚೇರಿಗಳಲ್ಲಿ ಇರುವಂತೆ ಮತ್ತು ಅಗತ್ಯವಿರುವಂತೆ ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳ ಸಮನ್ವಯದಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದಾರೆ. ಪೂರ್ವಾನುಮತಿ ಇಲ್ಲದೆ ಯಾರೂ ಜಿಲ್ಲೆಯಿಂದ ಹೊರ ಹೋಗಬಾರದು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

2 ಲಕ್ಷ ರೂಪಾಯಿ ಪರಿಹಾರ : ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ.

ಮಾತ್ರವಲ್ಲ, ಘಟನೆಯಲ್ಲಿ ಮತಪಟ್ಟವರ ಬಂಧುಗಳಿಗೆ ಪ್ರಧಾನಿ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ಪ್ರಕಟಿಸಿದ್ದಾರೆ.ಕೇರಳದ ಗುಡ್ಡಗಾಡು ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಕ್ಕಳು ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಕ್‌್ಸನಲ್ಲಿನ ಪೋಸ್ಟ್‌ನಲ್ಲಿ, ಮೋದಿ, ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ತೊಂದರೆಗೀಡಾಗಿದೆ. ನನ್ನ ಆಲೋಚನೆಗಳು ತಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೂ ಮತ್ತು ಗಾಯಗೊಂಡವರ ಪ್ರಾರ್ಥನೆಯೊಂದಿಗೆ ಇವೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಕೇರಳ ಸಿಎಂ ವಿಜಯನ್‌ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ರಾಜ್ಯದ ಇಬ್ಬರು ಕೇಂದ್ರ ಸಚಿವರಾದ ಸುರೇಶ್‌ ಗೋಪಿ ಮತ್ತು ಜಾರ್ಜ್‌ ಕುರಿಯನ್‌ ಅವರೊಂದಿಗೆ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ ಎಂದು ಅಧಿಕತ ಮೂಲಗಳು ತಿಳಿಸಿವೆ.

ನಡೆಯುತ್ತಿರುವ ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಈ ಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಮೋದಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಕೇಳಿದ್ದಾರೆ ಎಂದು ಅವರು ಹೇಳಿದರು.

RELATED ARTICLES

Latest News