Saturday, September 14, 2024
Homeರಾಷ್ಟ್ರೀಯ | Nationalಉತ್ತರಾಕಾಶಿ ಸುರಂಗ ದಿಂದ ಬದುಕಿಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ

ಉತ್ತರಾಕಾಶಿ ಸುರಂಗ ದಿಂದ ಬದುಕಿಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ,ನ.29- ಉತ್ತರಾಕಾಶಿಯಲ್ಲಿ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಸಿದಂತೆ ರಕ್ಷಣೆಗೊಂಡ ಕಾರ್ಮಿಕರ ಜೊತೆಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರಮೋದಿ ಮಾತುಕತೆ ನಡೆಸಿದರು. ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದ ಅವರು, ನೀವು ಸುರಕ್ಷಿತವಾಗಿ ಹೊರ ಬಂದಿರುವುದು ಖುಷಿಯ ಸಂಗತಿ. ಅದನ್ನು ಶಬ್ದದಲ್ಲಿ ವರ್ಣನೆ ಮಾಡಲು ಸಾಧ್ಯವಿಲ್ಲ. ಕೇದಾರನಾಥ ಬದರಿನಾಥ ಆರ್ಶಿವಾದ ಎಂದರು.

ಎಲ್ಲರ ಧೈರ್ಯ ಮೆಚ್ಚುವಂತದ್ದು, ಒಬ್ಬರಿಗೊಬ್ಬರು ಆತ್ಮ ವಿಶ್ವಾಸ ತುಂಬಿದ್ದೀರಿ ಅದು ದೊಡ್ಡ ವಿಚಾರವಾಗಿದೆ. ನಾನು ಸಿಎಂ ಸೇರಿ ಎಲ್ಲರಿಂದ ಮಾಹಿತಿ ಪಡೆಯುತ್ತಿದ್ದೆ. ಮಾಹಿತಿ ಪಡೆದರೂ ನಿಮ್ಮ ಬಗೆಗಿನ ಚಿಂತೆ ಕಡಿಮೆಯಾಗುತ್ತಿರಲಿಲ್ಲ. ನಿಮ್ಮ ಕುಟುಂಬಸ್ಥರ ಪುಣ್ಯದಿಂದ ಎಲ್ಲರೂ ಸುರಕ್ಷಿತವಾಗಿ ಹೊರಬಂದದ್ದೀರಿ ಹೇಳಿದ್ದಾರೆ.

ಉತ್ತರಕಾಶಿಯಲ್ಲಿ ಕಾರ್ಮಿಕ ಸಹೋದರರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನು ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ. ದೀರ್ಘಾವಯ ಕಾಯುವಿಕೆಯ ಬಳಿಕ ನೀವು ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗಿರುವುದು ತುಂಬಾ ತೃಪ್ತಿದಾಯಕ ಸಂಗತಿ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ..?

ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂ ಕೂಡ ಹರ್ಷ ವ್ಯಕ್ತಪಡಿಸಿದ್ದು, ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ತಿಳಿಸಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಸಿಲ್‍ಕ್ಯಾರ ಹಾಗೂ ದಂಡಲ್‍ಗಾಂವ್‍ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು.
ನವೆಂಬರ್ 12ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದಿತ್ತು.

ಅದರೊಳಗೆ 41 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಸತತ ಪ್ರಯತ್ನದ ಬಳಿಕ 17 ದಿನಗಳ ನಂತರ ಈ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸದ್ಯ ಕಾರ್ಮಿಕರಿಗೆ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಲವು ರೀತಿಯ ವೈದ್ಯಕೀಯ ತಪಾಸಣೆ ನಡೆದಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು 41 ಕಾರ್ಮಿಕರಿಗೆ ಹೂಮಾಲೆಯೊಂದಿಗೆ ಸ್ವಾಗತಿಸಿ, ಕೈಕುಲುಕಿ ಅವರನ್ನು ಅಪ್ಪಿಕೊಂಡರು, ರಕ್ಷಣಾ ತಂಡಗಳು ಮತ್ತು ಅಕಾರಿಗಳು ಚಪ್ಪಾಳೆ ತಟ್ಟಿದರು.

RELATED ARTICLES

Latest News