ಭಾನುವಾರ ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ

Social Share

ನವದೆಹಲಿ,ಅ.18- ಪ್ರಧಾನಿ ನರೇಂದ್ರಮೋದಿ ಭಾನುವಾರ ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸುವ ಸಾಧ್ಯತೆ ಇದೆ. ದೀಪಾವಳಿಯ ಅಂಗವಾಗಿ ಭಾನುವಾರ ಸಂಜೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿರುವ ಅವರು, ದೀಪೋತ್ಸವ ಮತ್ತು ಆರತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇದೇ ವೇಳೆ ಶ್ರೀರಾಮ ಮಂದಿರದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಲಿದ್ದಾರೆ. ಮೋದಿ ಭೇಟಿಯ ವೇಳೆ ಹಸಿರು ಮತ್ತು ಡಿಜಿಟಲ್ ಪಟಾಕಿಯ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಅಯೋಧ್ಯೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಉತ್ತರಖಂಡ್‍ನ ಕೇದಾರನಾಥ, ಬದ್ರಿನಾಥ ದೇವಸ್ಥಾನಗಳಿಗೂ ಪ್ರಧಾನಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದಲ್ಲದೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Articles You Might Like

Share This Article