ಮೋದಿ ಮಂಡ್ಯ ಭೇಟಿ : ಸಂಚಾರ ದಟ್ಟಣೆ ನಿಯಂತ್ರಕ್ಕೆ ಪರ್ಯಾಯ ಮಾರ್ಗ

Social Share

ಬೆಂಗಳೂರು, ಮಾ.9- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೇ ಮಾರ್ಚ್ 12ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡಲಿರುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸೃಷ್ಟಿ ಸಾಧ್ಯತೆ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡು ಪರ್ಯಾಯ ಮಾರ್ಗ ಸೂಚಿಸಿದೆ.

ಮಾರ್ಚ್ 12ರಂದು ಮಂಡ್ಯ ಜಿಲ್ಲೆ ಹಾಗೂ ಧಾರವಾಡಕ್ಕೆ ಪ್ರಧಾನಮಂತ್ರಿಗಳು ಆಗಮಿಸಲಿದ್ದಾರೆ. ಅಂದು ಅವರು ಮಧ್ಯಾಹ್ನ 12 ಗಂಟೆಗೆ ದಶಪಥ ರಸ್ತೆಯಾದ ಬೆಂಗಳೂರು- ಮೈಸೂರು ಎಕ್ಸಪ್ರೆಸ್ ವೇ ಅನ್ನು ಉದ್ಘಾಟಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲೆ ಮದ್ದೂರು ಸಮೀಪದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮದ್ದೂರು/ಮಂಡ್ಯ ವ್ಯಾಪ್ತಿಯಲ್ಲಿ ಲಕ್ಷಾಂತರ ಜನರು, ಬಿಜೆಪಿ ಕಾಯಕರ್ತರು ಸೇರಲಿದ್ದಾರೆ. ಈ ಕಾರಣಕ್ಕೆ ಸಂಚಾರ ಪೊಲೀಸರು ವಾಹನ ಸವಾರರಿಗೆ ಮಾರ್ಚ್ 12ರಂದು ಪರ್ಯಾಯ ಮಾರ್ಗಗಳನ್ನು ಕಲ್ಪಿಸಿದ್ದಾರೆ. ಆ ಮಾರ್ಗಗಳ ಮಾಹಿತಿ ಇಲ್ಲಿ ತಿಳಿಯಬಹುದು.

ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಗೆ ಮಹೂರ್ತ ಫಿಕ್ಸ್..?

ಮಂಡ್ಯ/ಮದ್ದೂರು: ಪರ್ಯಾಯ ಮಾರ್ಗಗಳು ಮೈಸೂರು ನಗರದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸಲಿರುವ ಎಲ್ಲ ವಿಧದ ವಾಹನಗಳು ಮೈಸೂರು- ಬನ್ನೂರು ಮಾರ್ಗವಾಗಿ ಕಿರುಗಾವಲು ಅಲ್ಲಿಂದ ಮಳವಳ್ಳಿ- ಹಲಗೂರು- ಕನಕಪುರ ಹಾದು ಬೆಂಗಳೂರು ತಲಪಬೇಕು.

ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಬರುವವರು ಮೈಸೂರು- ಶ್ರೀರಂಗಪಟ್ಟಣ- ಪಾಂಡವಪುರ- ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಬರಬಹುದು.

ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಬರುವವ ಎಲ್ಲ ವಾಹನ ಸವಾರರು, ತುಮಕೂರಿನಿಂದ ಬೆಳ್ಳೂರು ಕ್ರಾಸ್-ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ- ಮೈಸೂರು ಮಾರ್ಗವಾಗಿ ಸಂಚರಿಸುವಂತೆ ಪೊಲೀಸರು ಕೋರಿದ್ದಾರೆ.

ಕೇಂದ್ರ ಚುನಾವಣಾ ಆಯುಕ್ತರಿಂದ ಚುನಾವಣೆ ಪೂರ್ವ ತಯಾರಿ ಪರಿವೀಕ್ಷಣೆ

ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಓಡಾವವರು ಮಾ.12ರಂದು ಬೆಂಗಳೂರು-ಚನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು- ಬನ್ನೂರು- ಮೈಸೂರು- ಮಾರ್ಗವಾಗಿ ಸಂಚರಿಸಲು ಅನುವು ಮಾಡಲಾಗಿದೆ.

ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ವಾಹನ ಸವಾರರು ಬೆಂಗಳೂರಿನಿಂದ ಚನ್ನಪಟ್ಟಣ- ಹಲಗೂರು- ಮಳ್ಳವಳ್ಳಿ- ಕೊಳ್ಳೇಗಾಲ-ಮಹದೇವಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸಲು ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.

PM Modi, hold, roadshow, Mandya,

Articles You Might Like

Share This Article