Thursday, November 21, 2024
Homeರಾಷ್ಟ್ರೀಯ | Nationalನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ

ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ

ನವದೆಹಲಿ,ಡಿ.29- ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ 11,100 ಕೋಟಿ ರೂ. ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ರಾಮ ಮಂದಿರದ ಶಂಕು ಸ್ಥಾಪನೆ ಸಮಾರಂಭಕ್ಕೆ ವಾರಗಳ ಮೊದಲು, ಪ್ರಧಾನಿ ಮೋದಿ ಅವರು ದೇವಾಲಯದ ನಗರದಲ್ಲಿ ನಾಲ್ಕು ಹೊಸ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ. ಇದರ ಜೊತೆಗೆ ಮೋದಿ ಅವರು ಅಯೋಧ್ಯೆಯಲ್ಲಿ ಗ್ರೀನ್ ಫೀಲ್ಡ ಟೌನ್ಶಿಪ್‍ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ 11.15 ಕ್ಕೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವರು.

ನೂತನವಾಗಿ ನಿರ್ಮಿಸಲಾಗಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಮಧ್ಯಾಹ್ನ 12.15ಕ್ಕೆ ಸಾರ್ವಜನಿಕರ ಸೇವೆಗೆ ಲೋರ್ಕಾಪಣೆ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 15,700 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೇರವೇರಿಸುವರು.

ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್

ಅಯೋಧ್ಯೆಯಲ್ಲಿ ಆಧುನಿಕ ವಿಶ್ವ ದರ್ಜೆಯ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವುದು, ಸಂಪರ್ಕವನ್ನು ಸುಧಾರಿಸುವುದು ಮತ್ತು ನಗರದ ಶ್ರೀಮಂತ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅದರ ನಾಗರಿಕ ಸೌಲಭ್ಯಗಳನ್ನು ನವೀಕರಿಸುವುದು ಪ್ರಧಾನಮಂತ್ರಿಯವರ ದೃಷ್ಟಿಯಾಗಿದೆ.

240 ಕೋಟಿ ರೂ. ವೆಚ್ಚದಲ್ಲಿ ಅಯೋಧ್ಯೆ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾರ್ಯ ನಡೆದಿದೆ. ಇದು ಈಗ ಮೂರು ಅಂತಸ್ತಿನ ನಿಲ್ದಾಣವಾಗಿದ್ದು, ಲಿಫ್ಟ್‍ಗಳು, ಎಸ್ಕಲೇಟರ್‍ಗಳು, ಫುಡ್ ಪ್ಲಾಜಾಗಳು, ಕ್ಲೋಕ್ ರೂಮ್‍ಗಳು, ಮಕ್ಕಳ ಆರೈಕೆ ಕೊಠಡಿಗಳು, ವೇಟಿಂಗ್ ಹಾಲ್‍ಗಳು ಮುಂತಾದ ಆಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.
ಸುಂದರವಾದ ಮತ್ತು ಆಕರ್ಷಕ ವಿನ್ಯಾಸದ ಆಸನಗಳು, ಉತ್ತಮ ಲಗೇಜ್ ರ್ಯಾಕ್, ಸೂಕ್ತವಾದ ಮೊಬೈಲ್ ಹೋಲ್ಡರ್‍ನೊಂದಿಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಎಲಇಡಿ ಲೈಟ್‍ಗಳು, ಸಿಸಿಟಿವಿ, ಸಾರ್ವಜನಿಕ ಮಾಹಿತಿ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಹೊಂದಿರುವ ಅಮೃತ್ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡುವರು.

ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ

ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‍ಪ್ರೆಸ್ ಮತ್ತು ಮಾಲ್ಡಾ ಟೌನ್- ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ಹಸಿರು ನಿಶಾನೆ ಸಿಗಲಿದೆ. ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‍ಪ್ರೆಸ್; ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‍ಪ್ರೆಸ್; ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‍ಪ್ರೆಸ್; ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‍ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‍ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇರಿದಂತೆ ಒಟ್ಟು ಆರು ಹೊಸ ವಂದೇ ಭಾರತ್ ರೈಲುಗಳಿಗೂ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

RELATED ARTICLES

Latest News