ಬೆಂಗಳೂರು,ಫೆ.24- ರಾಷ್ಟ್ರ ರಾಜಧಾನಿ ನವದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ನಾಳೆಯಿಂದ ಎರಡು ದಿನಗಳ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಿ ಮೋದಿಯವರ ಏಕ ಭಾರತ ಶ್ರೇಷ್ಠ ಭಾರತದ ಆಶಯಕ್ಕೆ ಅನುಗುಣವಾಗಿ ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-02-2023)
ಉದ್ಘಾಟನಾ ದಿನದಂದು ಧರ್ಮಸ್ಥಳದ ಡಿ ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 26 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‍ಕುಮಾರ್ ಉಪಸ್ಥಿತರಿರುತ್ತಾರೆ.
ಆಜಾದಿ ಕಾ ಅಮೃತ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವದ ಎರಡು ದಿನಗಳ ಆಚರಣೆಗಳು ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತವೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ.
ಸರಿಸುಮಾರು 10,000 ದಿಂದ 12,000 ಕನ್ನಡಿಗರು ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದ್ದಾರೆ, ಅದರಲ್ಲಿ ಸುಮಾರು 3,500 ದೆಹಲಿ ಕರ್ನಾಟಕ ಸಂಘದ ಸದಸ್ಯರಾಗಿದ್ದಾರೆ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜು, ಎಂದಿದ್ದಾರೆ.
ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರು ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದಾರೆ. ಕರ್ನಾಟಕ ಸಂಘವು ಇದುವೇ ಫೆಬ್ರವರಿ 25 ಮತ್ತು 26, ರಂದು ಆಚರಿಸುತ್ತಿರುವ ಸುವರ್ಣ ಮಹೋತ್ಸವ ಆಚರಣೆಯು ಸಂಘದ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದೆ ಎಂದು ನಾವು ಭಾವಿಸುತ್ತೇವೆ.
ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ ಎಂದು ಮಾಜಿ ಅಧ್ಯಕ್ಷರು ಆರೋಪಿಸಿದ್ದಾರೆ.
#pmmodi, #inaugurate, #barisukannadadimdimava, #culturalfestival,