ನಾಳೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ

Social Share

ಬೆಂಗಳೂರು,ಜ.11- ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯಗಳು ಪಾಲ್ಗೊಳ್ಳುತ್ತಿವೆ.

ಬಿಜೆಪಿಯ ಲಕ್ಕಿ ತಾಣವಾದ ಸ್ಥಳದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಮೈದಾನದಲ್ಲಿ ಕಾರ್ಯಕ್ರಮ ಮಾಡಿದಾಗಲೆಲ್ಲಾ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಬಿಜೆಪಿ ಅದೃಷ್ಟ ಗ್ರೌಂಡ್ ಎನಿಸಿಕೊಂಡಿದೆ. ಅದೇ ಕಾರಣಕ್ಕೆ ಧಾರವಾಡದ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯಲ್ಲಿ ಉದ್ಘಾಟನೆ ಭಾಗ್ಯ ಸಿಕ್ಕಿದೆ.

ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ರೈಲ್ವೇ ಮೈದಾನ ಬಿಜೆಪಿಯ ಅದೃಷ್ಟದ ಲಕ್ಮ್ಷೀ ಎಂದೇ ಕರೆಯಲಾಗುತ್ತದೆ. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ಆಗಿದ್ದಾಗ ಇದೇ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

2004ರಲ್ಲಿ ವಿಜಯ ಸಂಕಲ್ಪ ಯಾತ್ರೆ ಮಾಡಿದ್ದ ಬಿಜೆಪಿ, 44 ಸ್ಥಾನಗಳಿಂದ 79 ಸ್ಥಾನಗಳಿಗೆ ಏರಿಕೆ ಮಾಡಿಕೊಂಡಿತ್ತು. ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಅತಿ ಹೆಚ್ಚು ಸೀಟು ಗೆದ್ದು ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಅವಯಲ್ಲಿಯೇ ಜೆಡಿಎಸ್ ಜೊತೆ ಸೇರಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿತ್ತು. ಅದೇ ಕಾರಣಕ್ಕೆ ಇದೇ ರೈಲ್ವೇ ಮೈದಾನದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲು ಮುಂದಾಗಿದೆ.

ಯಾವುದೇ ಕಾರಣಕ್ಕೂ 3ನೇ ಮಹಾಯುದ್ಧ ನಡೆಯಲ್ಲ: ಝೆಲೆನ್​ಕ್ಸಿ

ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ದಿಢೀರಾಗಿ ಹುಬ್ಬಳ್ಳಿಗೆ ಶಿಫ್ಟ್ ಮಾಡಲಾಗಿದೆ. ಐದು ದಿನಗಳ ಕಾಲ ಯುವ ಜನೋತ್ಸವ ನಡೆಯಲಿದೆ. ಯುವಜನೋತ್ಸವದ ಎಲ್ಲಾ ಕಾರ್ಯಕ್ರಮ ಕೆಸಿಡಿ ಕಾಲೇಜು ಆವರಣದಲ್ಲಿ ನಡೆಯುತ್ತಿವೆ. ಆದರೆ ಉದ್ಘಾಟನೆ ಮಾತ್ರ ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಎನ್ನುವುದು ವಿಶೇಷ.

ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯಲು ಬಿಜೆಪಿ ಮುಂದಾಗಿದೆ. ಒಂದು ಕಡೆ ಯುವ ಸಮುದಾಯದಲ್ಲಿ ಚುನಾವಣಾ ಕಿಚ್ಚು ಹಚ್ಚುವುದು. ಮತ್ತೊಂದು ಕಡೆ ಅದೇ ಕ್ರೀಡಾಂಗಣದಲ್ಲಿ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ.

ಬಿಜೆಪಿ ಉದ್ದೇಶಿತ 150 ಸ್ಥಾನಗಳನ್ನು ಗೆಲ್ಲಲು ರೈಲ್ವೆ ಮೈದಾನದಿಂದ ರಣಕಹಳೆ ಮೊಳಗಿಸಲು ಬಿಜೆಪಿ ಮುಂದಾಗಿದೆ. ರೈಲ್ವೇ ಮೈದಾನ ನಮಗೆ ಅದೃಷ್ಟದ ತಾಣ ಇಲ್ಲಿ ಕಾರ್ಯಕ್ರಮ ಮಾಡಿದಾಗಲೆಲ್ಲಾ ಒಳ್ಳೆಯದಾಗಿದೆ. ರೈಲ್ವೇ ಮೈದಾನದಲ್ಲಿ ಸಮಾವೇಶ ಮಾಡಿದಾಗ ಹೆಚ್ಚು ಸೀಟು ಗೆದ್ದಿದ್ದೇವೆ ಎಂದು ಸ್ಥಳೀಯ ಬಿಜೆಪಿ ನಾಯಕರು ಹೇಳುತ್ತಾರೆ.

12 ಫೆಬ್ರವರಿ 2023ಕ್ಕೆ ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿಯವರು ಬರುತ್ತಿದ್ದಾರೆ. ಶಿವಮೊಗ್ಗ ಕಾರ್ಯಕ್ರಮದ ಮೂಲಕ ಮಲೆನಾಡು ಭಾಗದಲ್ಲಿ ಮತಬೇಟೆಗೆ ಬಿಜೆಪಿ ಲಗ್ಗೆ ಹಾಕ್ತಿದೆ.

19ರಂದು ನಾರಾಯಣಪುರದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ.

ಪಾಕ್ ಮಾಜಿ ಪ್ರಧಾನಿ ಇಮ್ರಾನ್‍ಖಾನ್ ವಿರುದ್ಧ ಬಂಧನ ವಾರಂಟ್ ಜಾರಿ

ಸಕಲ ತಯಾರಿ: ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವಜನೋತ್ಸವದಲ್ಲಿ ದೇಶದ ವಿವಿಧೆಡೆಯಿಂದ ಸುಮಾರು 8 ಸಾವಿರಕ್ಕೂ ಹೆಚ್ಚು ಯುವಕರು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಹಲವಾರು ವಿವಿಧ ಕಾರ್ಯಕ್ರಮಗಳನ್ನು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಕಲ ರೀತಿಯಲ್ಲಿ ತಯಾರಿ ನಡೆಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯೇ ಉದ್ಘಾಟನೆ ಮಾಡಲಿರುವುದರಿಂದ ಧಾರವಾಡದ ಕರ್ನಾಟಕ ಕಾಲೇಜು, ಕರ್ನಾಟಕ ವಿವಿ, ಕೃಷಿ ವಿವಿಗೆ ಸಂಪರ್ಕ ಕಲ್ಪಿಸುವ ಒಟ್ಟು 12 ರಸ್ತೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಜತೆಗೆ ಗಟಾರುಗಳ ಸ್ವಚ್ಛತೆ, ಕಸ ನಿರ್ವಹಣೆ ಮಾಡಲಾಗಿದ್ದು, ಮಹಾನಗರ ಪಾಲಿಕೆಯ 100 ಸಿಬ್ಬಂದಿ ಬಳಸಿಕೊಳ್ಳಲಾಗಿತ್ತು.

ಇಷ್ಟೇ ಅಲ್ಲದೆ ಯುವ ಸಮ್ಮೇಳನದ ಹಿನ್ನೆಲೆಯಲ್ಲಿ ಧಾರವಾಡ-ಹುಬ್ಬಳ್ಳಿ ನಗರಗಳ ಸಂಪೂರ್ಣ ಚಿತ್ರಣವನ್ನೇ ಬದಲಿಸುವ ಕಾರ್ಯ ಮಾಡಲಾಗಿದೆ. ಮುಖ್ಯರಸ್ತೆ, ಪ್ರವಾಸಿ ಸ್ಥಳಗಳ ವೈಭವೀಕರಣ, ರಸ್ತೆ, ಉದ್ಯಾನವನ, ಕೆರೆ ಹಾಗೂ ಸಾಂಸ್ಕೃತಿಕ ಸ್ಥಳಗಳನ್ನು ಶೃಂಗರಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಒಂದು ವಾರ ಹಬ್ಬದ ವಾತಾವರಣ ಮೂಡುವಂತೆ ಮಾಡಲು ಅಕಾರಿಗಳು ಮುಂದಾಗಿದ್ದಾರೆ. ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಗಳಿಗೆ ಯೋಗಾ ಮ್ಯಾಟ್, ಧಾರವಾಡ ಪೇಡ, ರಾಷ್ಟ್ರ ಧ್ವಜವಿರುವ ಫ್ರೇಮ್ ಕೊಡುವ ಮೂಲಕ ಧಾರವಾಡದ ಯುವ ಸಮ್ಮೇಳನದ ನೆನಪು ಸದಾ ಇರುವಂತೆ ಮಾಡಲು ಮುಂದಾಗಿದ್ದಾರೆ.

ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೋಂದಣಿ ಕಡ್ಡಾಯವಾಗಿದೆ. ದೇಶಾದ್ಯಂತ ನೋಂದಣಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ವೆಬ್‍ಸೈಟ್‍ನ್ನು ರಚಿಸಿದೆ. ನೋಂದಣಿ ಸಂಪೂರ್ಣ ಉಚಿತವಾಗಿದೆ. ಸಮ್ಮೇಳನಕ್ಕೆ ಬೇರೆ ಬೇರೆ ರಾಜ್ಯಗಳ ಸಾವಿರಾರು ಯುವ ಕಲಾವಿದರು ಆಗಮಿಸುತ್ತಿದ್ದು ಸೋಮವಾರ ಕಾಶ್ಮೀರದಿಂದಲೂ ತಂಡ ಆಗಮಿಸಿದೆ.

ದ್ವೇಷ ಹರಡುವ ರಾಜಕಾರಣದಿಂದ ಜನ ಬೇಸತ್ತಿದ್ದಾರೆ : ರಾಹುಲ್ ಗಾಂಧಿ

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ಪ್ರಧಾನಿ ಮೋದಿ ಅವರು ರೋಡ್ ಶೋ ಶೋ ನಡೆಸಲಿದ್ದಾರೆ. ಅದಕ್ಕಾಗಿ ರಸ್ತೆ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಹಿಂದುಗಡೆ ನಿಂತು ಮೋದಿ ಯವರನ್ನು ನೋಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು ವೇದಿಕೆ ಬಳಿ ಈಗಾಗಲೇ ಪೆÇಲೀಸರು ಬಿಗಿ ಭದ್ರತೆ ಒದಗಿಸಿದ್ದು, ಮೈದಾನದೊಳಗೆ ಪ್ರವೇಶಿಸುವ ಪ್ರತಿಯೊಬ್ಬರ ಹೆಸರು, ಮೊಬೈಲ್ ನಂಬರ್ ಸಮೇತ ನೋಂದಣಿ ಮಾಡಿಕೊಂಡು ಬಿಡುವ ವ್ಯವಸ್ಥೆ ಮಾಡಲಾಗಿದೆ.

ಶೆಟ್ಟರ್‍ಗೆ ಮತ್ತೆ ಕೊಕ್: ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿನಿಸುವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿಯೇ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದರೂ, ವೇದಿಕೆ ಕಾರ್ಯಕ್ರಮದ ಗಣ್ಯರ ಪಟ್ಟಿಯಲ್ಲಿ ಶೆಟ್ಟ ಹೆಸರು ಮತ್ತೆ ಕೈಬಿಡಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಸೇರಿದಂತೆ ಮತ್ತಿತರು ಭಾಗಿಯಾಗಲಿದ್ದಾರೆ.

PM Modi, inaugurate, National Youth, Festival, Karnataka,

Articles You Might Like

Share This Article