ಸೆ.2ರಂದು ರಾಜ್ಯಕ್ಕೆ ಪ್ರಧಾನಿ ಮೋದಿ

Social Share

ಬೆಂಗಳೂರು,ಆ.24- ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‍ಎಂಪಿಎ) ಸುಮಾರು 1,200 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಸಾಗರಮಾಲದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದು, ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪರೇಖೆ ಅಂತಿಮಗೊಳ್ಳಲಿದೆ.

ಅಂದು ಬೆಳಗ್ಗೆ ಕೊಚ್ಚಿಯಲ್ಲಿ ನಡೆಯುವ ಕಾರ್ಯಕ್ರಮದ ಬಳಿಕ ಸಂಜೆ 3.45ಕ್ಕೆ ಮಂಗಳೂರಿಗೆ ಪ್ರಧಾನಿ ಆಗಮಿಸಲಿದ್ದು, ಎನ್‍ಎಂಪಿಎಗೆ ಭೇಟಿ ನೀಡಿ ಅಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ.

ಬಳಿಕ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರಮೋದಿ ಅವರು ಸಾರ್ವಜನಿಕ ಸಮಾವೇಶಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಹುತೇಕ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸಮಾವೇಶ ನಡೆಯುವ ಸಾಧ್ಯತೆಯಿದೆ.

ಪ್ರಧಾನಿಯ ಅವರೊಂದಿಗೆ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ, ಕೇಂದ್ರ ಬಂದರು ಮತ್ತು ನೌಕಾಯಾನ ಸಚಿವ ಸರ್ಬಾನಂದ ಸೋನೊವಾಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

Articles You Might Like

Share This Article