ನ.11ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಮೋದಿಯಿಂದ ಲೋಕಾರ್ಪಣೆ

Social Share

ಬೆಂಗಳೂರು,ಅ.19- ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದಾರೆ. ಟರ್ಮಿನಲ್ 2 ಅಥವಾ ಟ2 ಅನ್ನು ಎರಡು ಹಂತಗಳಲ್ಲಿ 13,000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 2.54 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿರುವ ಟಿ2ನ ಮೊದಲ ಹಂತವನ್ನು ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳಿಸಲಾಗುತ್ತಿದೆ.

ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರ್ಷಕ್ಕೆ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. ಹಾಗಾಗಿ ವಿಮಾನ ನಿಲ್ದಾಣ ತನ್ನ ಸಾಮಥ್ರ್ಯ ಹೆಚ್ಚಿಸಲು ಮುಂದಾಗಿ ಇದೀಗ ಟರ್ಮಿನಲ್-2 ಸಿದ್ಧಗೊಂಡಿದೆ.

ಏರ್ಪೋರ್ಟ್ ಒಳಾಂಗಣವು ಸಂಪೂರ್ಣ ವುಡ್ ಡಿಸೈನ್, ಹಸಿರಿನೊಂದಿಗೆ ವಿನ್ಯಾಸಗೊಂಡಿದೆ. ಗ್ರೌಂಡ್ ಎಸಿ ಆಟೋ ಮೆಟಿಕ್ ಪಾಸ್‍ಪೋರ್ಟ್ ವೆರಿಫಿಕೇಷನ್, ಆಕರ್ಷಕ ಪ್ರೋರಿಂಗ್ ಹಾಗೂ ಅತ್ಯಾಧುನಿಕ ಟೆಕ್ನಾಲಾಜಿ ಹೊಂದಿದೆ.

ವಿಮಾನ ಪ್ರಯಾಣಿಕರು ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ಸಂದರ್ಭದಲ್ಲಿ ವ್ಯಕ್ತಿಯನ್ನು ಗುರುತಿಸಲು ಫೇಸ್ ರೆಕಗ್ನಿಷನ್, ಫಿಂಗರ್ ಪ್ರಿಂಟ್ ಸೆನ್ಸಾರ್ ಸೌಲಭ್ಯವಿದೆ. ಕೆಐಎಎಲ್ ನೂತನ ಟರ್ಮಿನಲ್‍ನಲ್ಲಿ ವಿಮಾನ ನಿಲ್ದಾಣದಲ್ಲಿನ ಸೌಲಭ್ಯಗಳ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ಪಡೆಯಲು ಇನ್ ಬಿಲ್ಟ್ ಸ್ಮಾರ್ಟ್ ಫೋನ್ ಅಪ್ಲಿಕೇಷನ್ ತಂತ್ರಜ್ಞಾನ ರೂಪಿಸಲಾಗಿದೆ.

ಟಿ2 ನಿರ್ಮಾಣವು 2018ರಲ್ಲಿ ಪ್ರಾರಂಭವಾಗಿದ್ದು, ಅದನ್ನು ಪೂರ್ಣಗೊಳಿಸಲು ಗಡುವು ನಿಗದಿ ಮಾಡಲಾಗಿತ್ತು. ಆದರೆ ಕೋವಿಡ್‍ನಿಂದಗ ಕೆಲಸಗಳು ಸ್ಥಗಿತಗೊಂಡಿದ್ದವು. ಎರಡನೇ ಹಂತವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Articles You Might Like

Share This Article