ನವದೆಹಲಿ, ಜ.23- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್‍ಬಿಪಿ) ಪುರಸ್ಕೃತರೊಂದಿಗೆ ನಾಳೆ ವೀಡಿಯೊ ಕಾನರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಜ್ಯ ಸಚಿವರಾದ ಡಾ. ಮುಂಜಪರಾ ಮಹೇಂದ್ರಭಾಯಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
5 ವರ್ಷಕ್ಕಿಂತ ಮೇಲ್ಪಟ್ಟ 18 ವರ್ಷ ಮೀರಿರದ ಬಾಲಕರು ಮತ್ತು ಪ್ರೌಢಾವಸ್ಥೆಯಲ್ಲಿರುವವರ ಅಸಾಧಾರಣ ಸಾಧನೆ ಗುರುತಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡಲಾಗುತ್ತದೆ. ವಿದ್ವತ್ಪೂರ್ಣ ಸಾಧನೆಗಳು, ಮನ್ನಣೆಗೆ ಅರ್ಹವಾದ ಕ್ರೀಡೆ, ಕಲೆ ಮತ್ತು ಸಂಸ್ಕೃತಿ, ಸಮಾಜ ಸೇವೆ ಮತ್ತು ಶೌರ್ಯ ಸಾಧನೆಗಳನ್ನು ಗುರುತಿಸಲಾಗುತ್ತದೆ. ಪ್ರಶಸ್ತಿ ಒಂದು ಲಕ್ಷ ನಗದು ನಗದು ಬಹುಮಾನ, ಪದಕ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ಪ್ರಶಸಿ ಪ್ರದಾನವಾಗಲಿದೆ.
ಪ್ರಧಾನಮಂತ್ರಿ ಅವರು ಪ್ರತಿ ವರ್ಷ ಪ್ರಶಸ್ತಿ ಪುರಸ್ಕøತರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಶಸ್ತಿ ಪುರಸ್ಕøತರು ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲಿದ್ದಾರೆ. ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಸಂದರ್ಭದಲ್ಲಿ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಪ್ರಧಾನಮಂತ್ರಿಯವರು 2022ನೇ ಸಾಲಿನ ಬಾಲ ಪುರಸ್ಕಾರ ಪಡೆದವರೊಂದಿಗೆ ಸಂವಾದ ನಡೆಸಲಿದ್ದಾರೆ.
ಮಕ್ಕಳು ತಮ್ಮ ಪೋಷಕರು ಮತ್ತು ಆಯಾ ಜಿಲ್ಲೆಯ ಜಿಲ್ಲಾಕಾರಿಗಳ ಜೊತೆ ಜಿಲ್ಲಾಕೇಂದ್ರ ಕಚೇರಿಯಿಂದ ಸಂವಾದದಲ್ಲಿ ಭಾಗವಹಿಸಬಹುದಾಗಿದೆ.ಈ ಸಂದರ್ಭದಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಧಾನಿ ಅವರು ಪ್ರಶಸ್ತಿ ಪುರಸ್ಕøತರಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸಲಿದ್ದಾರೆ.
2021ರ ಸಾಲಿನ ಪುರಸ್ಕøತರಿಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು. ಕೋವಿಡ್ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ಪ್ರಮಾಣಪತ್ರಗಳನ್ನು ನೀಡಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಕಾರ್ಯಕ್ರಮವನ್ನು ಬೆಳಗ್ಗೆ 11:30 ರಿಂದ ?https://pmindiawebcast.nic.inನಲ್ಲಿ ಪ್ರಸಾರ ಮಾಡಲಾಗುತ್ತದೆ.
# ಮನ್ ಕಿ ಬಾತ್:
ಪ್ರಧಾನಿ ಅವರ ಜನಪ್ರಿಯ ರೆಡಿಯೋ ಸರಣಿ ಮನ್ ಕಿ ಬಾತ್ ಕಾರ್ಯಕ್ರಮ ಜನವರಿ 30 ರಂದು ನಡೆಯಲಿದೆ.
ಗಾಂಧೀಜಿ ಅವರ ಪುಣ್ಯ ತಿಥಿಯಂದು ಅವರ ಸ್ಮರಣೆಯ ಬಳಿಕ ಬೆಳಗ್ಗೆ 11:30ಕ್ಕೆ ಪ್ರಧಾನಿ ಅವರ ಭಾಷಣ ಆರಂಭವಾಗಲಿದೆ ಎಂದು ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದೆ.
