ನಾಳೆ ರಾಜ್ಯಕ್ಕೆ ಮೋದಿ ಆಗಮನ, ಮೊಳಗಲಿದೆ ರಣಕಹಳೆ

ಬೆಂಗಳೂರು,ಮಾ.15-ಲೋಕ ಸಭೆ ಚುನಾವಣೆ ಮಹಾಸಮರಕ್ಕೆ ದಿನಗಣನೆ ಪ್ರಾರಂಭವಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕರುನಾಡಿನಲ್ಲಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ರಣ ಕಹಳೆ ಮೊಳಗಿಸಲಿದ್ದಾರೆ. ಕಲಬುರಗಿಯ ಎನ್ಎಂಆರ್ವಿ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿಯವರು ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ಭಾಗಿಯಾಗಲಿದ್ದಾರೆ. ಕಲಬುರಗಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ … Continue reading ನಾಳೆ ರಾಜ್ಯಕ್ಕೆ ಮೋದಿ ಆಗಮನ, ಮೊಳಗಲಿದೆ ರಣಕಹಳೆ