ಬೆಂಗಳೂರು,ಫೆ.26- ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿ ರುವ ಬೆನ್ನಲ್ಲೇ ನಾಳೆ ಪ್ರಧಾನಿ ಮೋದಿ ಅವರು ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,
ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿಯವರ ಆಗಮನ ಆಡಳಿತಾರೂಢ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಇದು ಸರ್ಕಾರಿ ಕಾರ್ಯಕ್ರಮ ಎಂದೇ ಹೇಳಲಾಗುತ್ತಿದ್ದರೂ ಹೊರನೋಟದಲ್ಲಿ ಬಿಜೆಪಿಯ ಪ್ರಚಾರ ಎಂದೇ ಬಿಂಬಿತವಾಗಿದೆ.
ನಾಳೆ ಬೆಳಗ್ಗೆ ನವದೆಹಲಿಗೆ 9 ಗಂಟೆಗೆ ಹೊರಡಲಿರುವ ಮೋದಿ ಅವರು 11.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರು, ಸಂಸದರು ಮತ್ತಿತರರು ಬರಮಾಡಿಕೊಳ್ಳಲಿದ್ದಾರೆ.
ರಾಷ್ಟ್ರಕವಿ ಮತ್ತು ಜಾ್ಞನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ಹಲವು ಯೋಜನಗಳಿಗೆ ಮೋದಿಯವರು ಚಾಲನೆ ನೀಡುತ್ತಿದ್ದು, ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಚುನಾವಣೆಯಲ್ಲಿ ಸ್ರ್ಪಸಲು ಈಗಾಗಲೇ ವಿದಾಯ ಹೇಳಿರುವ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಶಿವಮೊಗ್ಗದ ವಿಮಾನ ನಿಲ್ದಾಣವನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ವಿಮಾನ ನಿಲ್ದಾಣದ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡವು ಗಂಟೆಗೆ 300 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮಥ್ರ್ಯ ಹೊಂದಿದೆ. ಇದಲ್ಲದೆ 7,165 ಕೋಟಿ ಮೌಲ್ಯದ ಯೋಜನೆಗಳನ್ನೂ ಸಹ ಪ್ರಧಾನಿ ಉದ್ಘಾಟಿಸಲಿದ್ದಾರೆ.
ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ ಸರ್ವೇ ನಂ. 120 ರಲ್ಲಿ 775 ಎಕರೆ ಭೂಮಿಯಲ್ಲಿ ಏರ್ಪೋರ್ಟ್ ಕಾಮಗಾರಿಯು 384 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈಗಾಗಲೇ ಟ್ರಯಲ್ ಬೇಸ್ ಮೇಲೆ 2 ವಿಮಾನಗಳು ಲ್ಯಾಂಡ್ ಆಗಿವೆ. ಒಟ್ಟು ವಿಮಾನ ನಿಲ್ದಾಣಕ್ಕೆ 600 ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ಕಟ್ಟಡ ಕಾಮಗಾರಿಗೆ 449 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನು ಉಳಿದ ಹಣದಲ್ಲಿ ಭೂ ಖರೀದಿಗೆ ನೀಡಲಾಗಿದೆ. ಈ ನಿಲ್ದಾಣ 3.2 ಕಿಲೋಮೀಟರ್ ರನ್ ವೇ ಹೊಂದಿದೆ. ವಿಮಾನ ನಿಲ್ದಾಣದ ಸುತ್ತಲಿನ ಕೌಂಪೌಂಡ್ 15,900 ಮೀಟರ್ ಉದ್ದವಿದೆ.
ಇದಷ್ಟೇ ಅಲ್ಲದೆ, 110 ಕಿ.ಮೀ ಉದ್ದದ ಎಂಟು ಸ್ಮಾರ್ಟ್ ರಸ್ತೆಗಳು, ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್, ಸ್ಮಾರ್ಟ್ ಬಸ್ ಶೆಲ್ಟರ್ ಯೋಜನೆಗಳು, ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆ, ಅಭಿವೃದ್ಧಿ ಸೇರಿದಂತೆ 895 ಕೋಟಿ ರೂಪಾಯಿ ಮËಲ್ಯದ 44 ಸ್ಮಾರ್ಟ್ಸಿಟಿ ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.ಅಭಿವೃದ್ಧಿಗೊಂಡಿರುವ ವಸ್ತುಸಂಗ್ರಹಾಲಯಗಳು, 90 ಕನ್ಸರ್ವೆನ್ಸಿ ಲೇನ್ಗಳು, ಉದ್ಯಾನವನಗಳು ಮತ್ತು ನದಿ ಮುಂಭಾಗದ ಅಭಿವೃದ್ಧಿ ಯೋಜನೆಗಳು. 990 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 2 ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಲ ಜೀವನ್ ಮಿಷನ್ (ಜೆಜೆಎಂ)ನಡಿ 950 ಕೋಟಿ ರೂ.ಗೂ ಹೆಚ್ಚು ಮËಲ್ಯದ ಬಹುಗ್ರಾಮ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಬೆಳಗಾವಿಗೆ ತೆರಳಲಿರುವ ಅವರು, ಅಲ್ಲಿ ಭರ್ಜರಿ ರೋಡ್ ಶೋ ನಡೆಸಿ ಸಮಾವೇಶ ನಡೆಯುವ ಸ್ಥಳಕ್ಕೆ ತೆರಳಲಿದ್ದಾರೆ.
ಮಧ್ಯಾಹ್ನ 3.15ರಿಂದ 4.30ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ, ಪಿಎಂ ಕಿಸಾನ್ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಬಳಿಕ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ.ಸಂಜೆ 4.40ಕ್ಕೆ ಕಾರ್ಯಕ್ರಮದ ಸ್ಥಳದಿಂದ ಹೆಲಿಕಾಪ್ಟರ್ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಂಜೆ 5.10ಕ್ಕೆ ಅಲ್ಲಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.
ಮೋದಿಯವರ ಮೆಗಾ ರೋಡ್ ಶೋಗಾಗಿ ಬೆಳಗಾವಿ ನಗರವನ್ನು ಅಲಂಕರಿಸಲಾಗಿದೆ. ಬೆಳಗಾವಿ ನಗರದ 8 ಕಿಮೀ ವ್ಯಾಪ್ತಿಯಲ್ಲಿ ಶಾಂತಿಯುತ ರೋಡ್ ಶೋ ನಡೆಸಲು ಕಳೆದ ಎರಡು ದಿನಗಳಿಂದ ಬೃಹತ್ ಭದ್ರತಾ ವ್ಯವಸ್ಥೆಯನ್ನು ಸಿದ್ಧಪಡಿಸಲಾಗಿದೆ.
ಬೆಳಗಾವಿ ಜಿಲ್ಲಾಡಳಿತ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನಿಗೆ ಭವ್ಯ ಸ್ವಾಗತ ಕೋರಲು ಮತ್ತು ಅಗಾಧವಾದ ಯಶಸ್ಸನ್ನು ಪಡೆಯುವಂತೆ ನೋಡಿಕೊಳ್ಳಲು ಹಗಲಿರುಳು ಶ್ರಮಿಸುತ್ತಿದ್ದಾರೆ.ಮೋದಿ ಅವರು ಬೆಳಗಾವಿ ನಗರದಲ್ಲಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಕನಿಷ್ಠ 10,000 ಮಹಿಳೆಯರು ತಮ್ಮ ತಲೆಯ ಮೇಲೆ ಕೇಸರಿ ಪೇಠವನ್ನು ಧರಿಸಿ ಪ್ರಧಾನಿಯನ್ನು ಸ್ವಾಗತಿಸಲಿದ್ದಾರೆ.
ಬೆಳಗಾವಿಯಲ್ಲಿ ಕನಿಷ್ಠ 10,000 ಧ್ವಜಗಳನ್ನು ಸ್ಥಾಪಿಸಲು 600 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಮೋದಿ ರೋಡ್ ಶೋ ಆರಂಭವಾಗುವ ವೇಳೆಗೆ ಇಡೀ ಬೆಳಗಾವಿ ನಗರಕ್ಕೆ ಕೇಸರಿ ಬಣ್ಣ ಬಳಿಯಲಾಗಿದೆ. ಸುರಕ್ಷತಾ ಕ್ರಮವಾಗಿ 8 ಕಿ.ಮೀ ಉದ್ದದ ಎರಡೂ ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಕಲಾವಿದರು ಪ್ರದರ್ಶಿಸುವ ಸಾಂಪ್ರದಾಯಿಕ ನೃತ್ಯಗಳನ್ನು ನೇರವಾಗಿ ಪ್ರದರ್ಶಿಸಲು ರೋಡ್ ಶೋ ನಡೆಯುವ ಮಾರ್ಗದಲ್ಲಿ ಸುಮಾರು 90 ದೊಡ್ಡ ಪರದೆಗಳನ್ನು ಅಳವಡಿಸಲಾಗಿದೆ. ರೋಡ್ ಶೋ ದಿನದಂದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲು ಬೆಳಗಾವಿ ಸಂಚಾರಿ ಪೊಲೀಸ್ ತಂಡವು ಸುತ್ತೋಲೆ ಹೊರಡಿಸಿದೆ.
#PMModi, #Visit, #Belagavi, #Tomorrow,