ಬೆಂಗಳೂರು,ಜ.31- ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ ತಿಂಗಳಿನಲ್ಲಿ ಮೂರು ಬಾರಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಫೆ.6ರಿಂದ ರಾಜ್ಯ ಪ್ರವಾಸ ಕೈಗೊಂಡು ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 8:20ರ ಸುಮಾರಿಗೆ ದೆಹಲಿಯಿಂದ ಹೊರಡುವ ಮೋದಿ ವಿಶೇಷ ವಿಮಾನದ ಮೂಲಕ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11:30ರ ಸುಮಾರಿಗೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆಯೋಜನೆಗೊಂಡಿರುವ ಭಾರತ ಇಂಧನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಂದು ಸಂಜೆ 3.30 ರಿಂದ 4:30ಕ್ಕೆ ತುಮಕೂರಿನಿಂದ ಗುಬ್ಬಿ ತಾಲ್ಲೂಕಿನ ಬಿದೇರಹಳ್ಳಿ ಕಾವಲ್‍ಗೆ ಎಚ್‍ಎಎಲ್‍ನ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿ
ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಜಲಜೀವನ್‍ಮಿಷನ್ ಯೋಜನೆಯಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳ ಕಾಮಗಾರಿಗಳಿಗೆ ಅದೇ ಸ್ಥಳದಿಂದ ಭೂಮಿಪೂಜೆ ನೆರವೇರಿಸಲಿದ್ದಾರೆ.
ಸಂಜೆ 4:40ಕ್ಕೆ ತುಮಕೂರು ಹೆಲಿಪ್ಯಾಡ್ ನಿಂದ ಬೆಂಗಳೂರು ಏಪೆರ್ಪೋರ್ಟ್‍ನತ್ತ ಪ್ರಯಾಣಿಸಲಿದ್ದಾರೆ. ಸಂಜೆ 5:20ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ.
ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಿದ ಬಿಆರ್‌ಎಸ್, ಎಎಪಿ
ಫೆಬ್ರವರಿ 2ನೇ ವಾರದಲ್ಲಿ ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿರುವ ಏರೋ ಇಂಡಿಯಾ ಕಾರ್ಯಕ್ರಮಕ್ಕೂ ಮೋದಿ ಆಗಮಿಸಲಿದ್ದಾರೆ. ಫೆ.6 ರಂದು ಒಂದು ದಿನದ ಕಾರ್ಯಕ್ರಮದ ನಂತರ ಫೆ.13ಕ್ಕೆ ಮತ್ತೆ ಬೆಂಗಳೂರಿಗೆ ಮೋದಿ ಭೇಟಿ ನೀಡಲಿದ್ದು, ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ಬು ಉದ್ಘಾಟನೆ ಮಾಡಲಿದ್ದಾರೆ.
ಅಂದು ಪಕ್ಷದ ಕಾರ್ಯಕ್ರಮಕ್ಕೂ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ, ಅದರ ನಂತರ ಮತ್ತೆ ಫೆ.27 ರಂದು ಪ್ರಧಾನಿ ಮೋದಿ ಮತ್ತೆ ಆಗಮಿಸಲಿದ್ದಾರೆ. ಫೆ.27ರಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಿದ್ದು, ಅಂದೇ ಶಿವಮೊಗ್ಗ ವಿಮಾನ ನಿಲ್ದಾಣ ರಾಷ್ಟ್ರಕ್ಕೆ ಸಮರ್ಪಣೆಯಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿಯವರನ್ನು ಆಹ್ವಾನಿಸಲಾಗಿದೆ. ಪ್ರಧಾನಿಗಳು ಕಾರ್ಯಕ್ರಮಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ.
ಅಮಿತ್ ಶಾ ಬೆನ್ನಲ್ಲೇ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲು ಸಜ್ಜಾಗಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಮೂರು ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
ಭಾರತೀಯರ ಮೇಲೆ ಖಲಿಸ್ತಾನಿ ಉಗ್ರರ ದಾಳಿಗೆ ಖಂಡನೆ
ಕಳೆದ ಬಾರಿ ಪ್ರವಾಸದ ವೇಳೆ ಕಲ್ಯಾಣ ಕರ್ನಾಟಕದ ಮೇಲೆ ಕಣ್ಣಿಟ್ಟಿದ್ದ ಮೋದಿ ಇದೀಗ ಹಳೇ ಮೈಸೂರು ಭಾಗದ ಮೇಲೆ ಚಿತ್ತ ನೆಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಬ್ಯಾಕ್ ಟು ಬ್ಯಾಕ್ ಎಂಟ್ರಿಗೆ ಬಿಜೆಪಿ ಕಾರ್ಯಕರ್ತರು ಹುಮಸ್ಸಿನಲ್ಲಿದ್ದಾರೆ.
ಫೆಬ್ರವರಿಯಲ್ಲಿ ಅಮಿತ್ ಶಾ ಪ್ರವಾಸಕ್ಕೂ ಸಮಯ ನಿಗದಿಪಡಿಸಲಾಗುತ್ತಿದೆ. ಇವರ ಜೊತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವರಾಜನಾಥಸಿಂಗ್ ಸೇರಿ ಹಲವು ನಾಯಕರೂ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಈ ಮೊದಲು ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪ್ರಚಾರ ಭಾಷಣಕ್ಕೆ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಕರ್ನಾಟಕವನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ತನ್ನ ತಂತ್ರ ಬದಲಾಯಿಸಿದ್ದು ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಮೋದಿ ಅವರ ರಾಜ್ಯ ಪ್ರವಾಸವನ್ನು ನಿಗದಿಪಡಿಸಿದೆ.
ಪಾಕ್ ಮಸೀದಿ ಸ್ಪೋಟದಲ್ಲಿ ಸತ್ತವರ ಸಂಖ್ಯೆ 80ಕ್ಕೆ ಏರಿಕೆ
ಮೇ ತಿಂಗಳಿನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ರಂಗಪ್ರವೇಶ ಮಾಡಿದ್ದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಸರಣಿ ಪ್ರವಾಸದ ಮೂಲಕ ರಾಜ್ಯ ಬಿಜೆಪಿಗೆ ಬೂಸ್ಟ್ ನೀಡಲು ಮುಂದಾಗಿದೆ.
PM Modi, Visit, Karnataka, February,