ಬೆಂಗಳೂರು, ಸೆ.1- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಲು ಮಂಗಳೂರಿಗೆ ಆಗಮಿಸಲಿದ್ದು, ಆಡಳಿತಾರೂಢ ಬಿಜೆಪಿಯಲ್ಲಿ ರಣೋತ್ಸಾಹ ಮೂಡಿದೆ.
ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ. ಇದು ಸಹಜವಾಗಿ ಕಮಲ ಪಡೆಯಲ್ಲಿ ಉತ್ಸಾಹ ಹೆಚ್ಚುವಂತೆ ಮಾಡಿದೆ.ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕಗ್ಗೂಲೆ, ಹಲ್ಲೆ , ಕಾರ್ಯಕರ್ತರ ರಾಜೀನಾಮೆ ಸೇರಿದಂತೆ ಹಲವಾರು ಘಟನೆಗಳಿಂದ ಬಿಜೆಪಿಯಲ್ಲಿ ಒಂದು ರೀತಿ ನಿರುತ್ಸಾಹದ ವಾತಾವಾರಣ ನಿರ್ಮಾಣವಾಗಿತ್ತು.
ಇದೀಗ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದು ಕಾರ್ಯಕರ್ತರಲ್ಲಿ ವಿಶ್ವಾಸವನ್ನು ಇಮ್ಮಡಿಗೊಳಿಸುವ ನಿರೀಕ್ಷೆಯನ್ನು ನಾಯಕರು ಇಟ್ಟುಕೊಂಡಿದ್ದಾರೆ. ಮೊದಲು ಕೇರಳದ ಕೊಚ್ಚಿಗೆ ತೆರಳಲಿರುವ ಮೋದಿ ಅವರು ಅಲ್ಲಿ ಕೊಚ್ಚಿನ್ ಶಿಪ್‍ಹ್ಯಾರ್ಡ್‍ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ವಿಕ್ರಾಂತ್ ಯುದ್ಧವಾಹಕ ನೌಕೆಯನ್ನು ಮೋದಿ ಲೋಕಾರ್ಪಣೆ ಮಾಡುವರು.
ಬಳಿಕ ನವಮಂಗಳೂರು ಬಂದರು ಪ್ರಾಕಾರ (ಎನ್‍ಎಂಪಿಎ)ದಲ್ಲಿ ಸುಮಾರು 1200 ಕೋಟಿ ರೂ. ವೆಚ್ಚದ ನಾನಾ ಕಾಮಗಾರಿಗೆ ಶಿಲಾನ್ಯಾಸ ಮತ್ತು ಅನಘಾ ರಿಫೈನರಿ ಬರ್ತ್ ಸೇರಿದಂತೆ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ನೆರವೇರಿಸಲಿದ್ದಾರೆ.
ಈಗಾಗಲೇ ಪೂರ್ಣಗೊಂಡಿರುವ ಅನಘಾ ರಿಫೈನರಿ, ಬರ್ತ್ ನಂ.14 ಸೇರಿದಂತೆ 6 ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅದೇ ರೀತಿ ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಂತರ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವರು.
ನಾಳೆ ಗಣೇಶೋತ್ಸವ ಕಾರ್ಯಕ್ರಮ ಇರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗಣೇಶ ಚತುರ್ಥಿಯ ಮೂರನೇ ದಿನವಾದ ನಾಳೆ ನಗರದ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ, ಗಣಪತಿ ನಿಮಜ್ಜನ ಕಾರ್ಯಕ್ರಮಗಳು ನಡೆಯಲಿವೆ. ಗಣಪತಿ ನಿಮಜ್ಜನ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಈ ರಜೆ ನೀಡಿರುವ ಅವಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವಜನಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸುವಂತೆ ಸೂಚಿಸಲಾಗಿದೆ.
ಪ್ರಧಾನಿ ಮೋದಿ ಸಮಾವೇಶಕ್ಕೆ ಯಾವುದೇ ನೆಪದಲ್ಲಿ ಅಡ್ಡಿಪಡಿಸುವ ಬಗ್ಗೆ ಜಾಲತಾಣಗಳಲ್ಲಿ ಕಂಡುಬಂದಿರುವ ಪೋಸ್ಟರ್ಗಳನ್ನು ಪೊಲೀಸ್ ಇಲಾಖೆ ಗಂಭೀರ ಪರಿಣಿಸಿದೆ.
ಕರಾವಳಿಯ ಬಿಜೆಪಿ ನಾಯಕರ ಅಸಮಾಧಾನವನ್ನು ಸಮಾವೇಶದಲ್ಲಿ ಹೊರಹಾಕುವುದಾಗಲೀ ಅಥವಾ ಪ್ರಧಾನಿ ರಸ್ತೆ ಮಾರ್ಗದಲ್ಲಿ ಸಂಚರಿಸುವ ವೇಳೆ ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಸಿಗದಂತೆ ಅತ್ಯಂತ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಮೋದಿ ಸಮಾವೇಶ ವಿರುದ್ಧ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿರುವವರ ಪಟ್ಟಿಸಿದ್ಧವಾಗಿದ್ದು, ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ವಾಸ್ತವ್ಯಕ್ಕೆ ಸಕ್ರ್ಯೂಟ್ ಹೌಸ್ ಏರ್ಪಾಟು:
ಪ್ರಧಾನಿ ಮೋದಿ ಮಂಗಳೂರಿನಲ್ಲಿ ವಾಸ್ತವ್ಯದ ಸಾಧ್ಯತೆ ಇದ್ದರೆ ಅದಕ್ಕೂ ಕದ್ರಿಯ ಸಕ್ರ್ಯೂಟ್ ಹೌಸ್‍ನಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಹಿಂದೆ ಎರಡು ಬಾರಿ ಪ್ರಧಾನಿ ಮೋದಿ ಅವರು ಕದ್ರಿ ಸಕ್ರ್ಯೂಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮಕ್ಕೆ ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಿಂದ ಲಕ್ಷಾಂತರ ಮಂದಿ ಕಾರ್ಯಕರ್ತರು ಬರಲಿದ್ದಾರೆ.
ಈಗಾಗಲೇ 1461 ಬಸ್‍ಗಳನ್ನು, 200 ಟೆಂಪೋ ಟ್ರಾವೆಲ್ ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಜಿಲ್ಲಾಡಳಿತ 70 ಸಾವಿರಕ್ಕೂ ಅಕ ಮಂದಿ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜÁರಿ, ಎಸ್. ಅಂಗಾರ ಮತ್ತು ಶಾಸಕರು ಉಪಸ್ಥಿತರಿರುತ್ತಾರೆ.