Friday, September 20, 2024
Homeರಾಷ್ಟ್ರೀಯ | Nationalವಯನಾಡಿಗೆ ಶನಿವಾರ ಪ್ರಧಾನಿ ಮೋದಿ ಭೇಟಿ

ವಯನಾಡಿಗೆ ಶನಿವಾರ ಪ್ರಧಾನಿ ಮೋದಿ ಭೇಟಿ

ನವದೆಹಲಿ,ಆ.8- ಶತಮಾನದಲ್ಲೇ ಕಂಡು ಕೇಳರಿಯದ ಭೀಕರ ಭೂಕುಸಿತಕ್ಕೆ ಸಾಕ್ಷಿಯಾಗಿರುವ ಭೂಮಿ ಮೇಲಿನ ಸ್ವರ್ಗ ಎಂದೇ ಕರೆಯುವ ಕೇರಳದ ವಯನಾಡಿಗೆ ಶನಿವಾರ ಪ್ರಧಾನಿ ನರೇಂದ್ರಮೋದಿ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಅವರು, ವಯನಾಡು ಸುತ್ತಮುತ್ತ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅವರು ಸಂತ್ರಸ್ತರನ್ನು ಭೇಟಿ ಯಾಗಿ ಸಾಂತ್ವಾನ ಹೇಳಲಿದ್ದಾರೆ.

ಜ.30ರಂದು ಸಂಭವಿಸಿದ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ನೂರಾರು ಮಂದಿ ಗಾಯ ಗೊಂಡಿದ್ದಾರೆ. ಭಾರತೀಯ ಸೇನೆ, NDRF ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ವಿಭಾಗಗಳು ತಮ್ಮ ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ, ಇದೀಗ ತಂಡಗಳು ಅರಣ್ಯ ಪ್ರದೇಶಗಳ ಮೇಲೆ ಕೇಂದ್ರೀಕರಿಸಿವೆ. ಕೇರಳ ಸರ್ಕಾರವು ನಾಪತ್ತೆಯಾದವರ ಕುಟುಂಬಗಳು ಮತ್ತು ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಶೋಧ ಕಾರ್ಯಗಳಲ್ಲಿ ಪಡೆದುಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂ„ ಬುಧವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಹೆಚ್ಚಿನ ಪರಿಹಾರ ಮತ್ತು ಸಮಗ್ರ ಪುನರ್ವಸತಿ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು. ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಗಾಂ„ಯವರು ಸರ್ಕಾರಕ್ಕೆ ಕರೆ ನೀಡಿದರು.
ಏತನ್ಮಧ್ಯೆ ಒಂದು ವಾರದ ಹಿಂದೆ ಸಂಭವಿಸಿದ ಭಾರೀ ಭೂಕುಸಿತದಿಂದ ಹಾನಿಗೊಳಗಾದ ಎಲ್ಲಾ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇರಳ ಸರ್ಕಾರ ಹೇಳಿದೆ.

RELATED ARTICLES

Latest News